ಪ್ರಮುಖ ಸುದ್ದಿಮೈಸೂರು

ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದ ಕಾರು: ಸ್ಥಳದಲ್ಲೇ ಮೂವರ ಸಾವು

crime-2ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಸೋಮವಾರ ಪೇಟೆಯ ಬಸವನಹಳ್ಳಿಯಲ್ಲಿ ನಡೆದಿದೆ.

ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ಬಸವನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 275ರಲ್ಲಿನ ಸೋಮವಾರಪೇಟೆಯ ಬಸವನಹಳ್ಳಿಯಲ್ಲಿ ಶನಿವಾರ ತಡರಾತ್ರಿ ನಡೆದ ಈ ದುರ್ಘಟನೆ ನಡೆದಿದ್ದು, ಮೃತಪಟ್ಟವರನ್ನು ಮೈಸೂರಿನ ಕೆ.ಜಿ.ಕೊಪ್ಪಲ್ ನಿವಾಸಿಗಳಾದ ನದೀಶ್(18), ಚೇತನ್(18),ಚಂದ್ರು(19) ಎಂದು ಗುರುತಿಸಲಾಗಿದೆ.

ಮಡಿಕೇರಿ ಪ್ರವಾಸಕ್ಕೆಂದು ಬಂದು ವಾಪಸ್ ಮೈಸೂರಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡಿರುವ ಕೆ.ಜಿ.ಕೊಪ್ಪಲಿನ ನಿವಾಸಿಗಳಾದ ಸುಹಾಸ್ ಜೆ.ಎಸ್.ಎಸ್.ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಪ್ರತಾಪ್ ಮತ್ತು ಶಿವಕುಮಾರ್ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಕುಶಾಲ ನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: