ಕರ್ನಾಟಕ

ಮಾರಕಾಸ್ತ್ರಗಳಿಂದ ಹೊಡೆದು ಯುವಕನ ಕಗ್ಗೊಲೆ

ರಾಜ್ಯ(ಹುಬ್ಬಳ್ಳಿ)ಜು.17:-  ಮಾರಕಾಸ್ತ್ರಗಳಿಂದ ಹೊಡೆದು ಯುವಕನನ್ನು  ಕಗ್ಗೊಲೆ ನಡೆಸಿದ ಘಟನೆ ಧಾರವಾಡ ಜಿಲ್ಲೆ ಕಲಘಟಗಿ ಪಟ್ಟಣದ ದಾಂಡೇಲಿ ರಸ್ತೆಯಲ್ಲಿ ನಡೆದಿದೆ.
ಮೃತನನ್ನು ಕಲಘಟಗಿ ತಾಲೂಕಿನ ಹನುಮಾಪೂರ ಗ್ರಾಮದ ನಿವಾಸಿ  ಕಲ್ಲಯ್ಯ ಶಂಕ್ರಯ್ಯ ಹಿರೇಮಠ (28)  ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಈತನನ್ನು ಕೊಲೆ ಮಾಡಿ ಮೃತದೇಹವನ್ನು ರಸ್ತೆ ಪಕ್ಕ ಎಸೆದು ಹೋಗಿದ್ದಾರೆ ಎನ್ನಲಾಗಿದೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: