ಸುದ್ದಿ ಸಂಕ್ಷಿಪ್ತ

ಜು. 19 ರಂದು ನಾಟಕ ಪ್ರದರ್ಶನ

ಮಡಿಕೇರಿ ಜು.17: ಮಹಾತ್ಮ ಗಾಂಧೀಜಿಯವರ ಜೀವನ ಶೈಲಿ, ಆದರ್ಶ ತತ್ವಗಳು, ಸ್ವಚ್ಛತೆ, ಶುಚಿತ್ವ ಕುರಿತು ಗಾಂಧೀಜಿ ಅವರು ನೀಡಿರುವ ಸಂದೇಶಗಳ ಕುರಿತು ಜನರಿಗೆ ಅರಿವು ಮೂಡಿಸಲು ಯುವ ಪುರುಷ ಎಂಬ ನಾಟಕವನ್ನು ಪ್ರದರ್ಶಿಸಲು ಉದ್ದೇಶಿಸಿದ್ದು, ಈಗಾಗಲೇ ರಾಜ್ಯ ಮಟ್ಟದಲ್ಲಿ ಈ ನಾಟಕವನ್ನು ಪ್ರದರ್ಶಿಸಲಾಗಿದ್ದು, ಇದು ಸ್ವಚ್ಛತೆ, ಶುಚಿತ್ವ ಹಾಗೂ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ಬಯಲು ಬಹಿರ್ದೆಸೆ ಮುಕ್ತ ಮಾಡುವಂತಹ ಮನೋಭಾವನೆಯಲ್ಲಿ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವಿದೆ.

ಕೊಡಗು ಜಿಲ್ಲೆಯಲ್ಲೂ ಕೂಡ ಈ ನಾಟಕವನ್ನು  ಸರ್ಕಾರದ ನಿರ್ದೇಶನದಂತೆ ಜುಲೈ, 19 ರಂದು  ಮಧ್ಯಾಹ್ನ 2 ಗಂಟೆಗೆ ನಗರದ ಕಾವೇರಿ ಹಾಲ್‍ನಲ್ಲಿ  ಪ್ರದರ್ಶಿಸಲಾಗುವುದು. ಜನ ಪ್ರತಿನಿಧಿಗಳು, ಸಾರ್ವಜನಿಕರು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜಿ.ಪಂ.ಸಿಇಒ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ. (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: