ಮೈಸೂರು

ಅ.17ರಂದು ರಾಜೀನಾಮೆ ನೀಡಿ, ಮುಂದಿನ ನಡೆ ಬಗ್ಗೆ ನಿರ್ಧಾರ: ಶ್ರೀನಿವಾಸ್ ಪ್ರಸಾದ್

ಅ.17ರಂದು ಮಧ್ಯಾಹ್ನ 12 ಗಂಟೆಗೆ ಸ್ಪೀಕರ್ ಕೆ.ಬಿ. ಕೋಳಿವಾಡರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುತ್ತೇನೆ. ಬಳಿಕ ಕಾಂಗ್ರೆಸ್‍ಗೆ ಗುಡ್‍ಬೈ ಹೇಳಲಿದ್ದೇನೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಅವರು ದೂರವಾಣಿ ಮೂಲಕ ನನ್ನೊಂದಿಗೆ ಚರ್ಚಿಸಿದ್ದಾರೆ. ಎಲ್ಲ ಪಕ್ಷಗಳಲ್ಲೂ ನನಗೆ ಒಳ್ಳೆಯ ಸ್ನೇಹಿತರಿದ್ದಾರೆ. ರಾಜೀನಾಮೆ ಬಳಿಕ ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.

ಏತನ್ಮಧ್ಯೆ ವಿಧಾನಪರಿಷತ್ ಸದಸ್ಯ ಡಿ.ಎಸ್. ವೀರಯ್ಯ ಭಾನುವಾರದಂದು ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಮಾಜಿ ಸಚಿವ ವಿ. ಶ್ರೀನಿವಾಸಪ್ರಸಾದ್ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ.

ಬಳಿಕ ಮಾತನಾಡಿದ ಡಿ.ಎಸ್. ವೀರಯ್ಯ, ಶ್ರೀನಿವಾಸ್ ಪ್ರಸಾದ್‍ರಿಗೆ ಬಿಜೆಪಿ ಪಕ್ಷಕ್ಕೆ ಆಹ್ವಾನ ನೀಡಲು ಅವರ ಮನೆಗೆ ಬಂದಿದ್ದೇನೆ. ಶ್ರೀನಿವಾಸ್ ಪ್ರಸಾದ್ ಒಬ್ಬ ರಾಷ್ಟ್ರೀಯ ನಾಯಕರು. ಅವರು ವಾಜಪೇಯಿ ಸರ್ಕಾರದಲ್ಲಿ ಕಾರ್ಯನಿರ್ವಹಿಸಿದ್ದರು. ಕಾಂಗ್ರೆಸ್‍ನ ಸಂಸ್ಕೃತಿಯೇ ಅಂಥದ್ದು. ಎಲ್ಲರನ್ನು ಬಳಸಿಕೊಂಡು ಬಳಿಕ ನಡುನೀರಲ್ಲಿ ಕೈ ಬಿಡುವುದೇ ಅದರ ಕೆಲಸ. ಶ್ರೀನಿವಾಸ್ ಪ್ರಸಾದ್ ಬಿಜೆಪಿಗೆ ಬಂದರೆ ಸ್ವಾಗತಿಸುತ್ತೇವೆ. ಅವರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಮಾಡುವ ಉದ್ದೇಶ ಹೊಂದಿದ್ದೇವೆ ಎಂದು ಹೇಳಿದ್ದಾರೆ.

ವೀರಯ್ಯ ಅವರೊಂದಿಗೆ ಸ್ಥಳೀಯ ಬಿಜೆಪಿ ಮುಖಂಡ ಹೆಚ್.ವಿ. ರಾಜೀವ್ ಸೇರಿದಂತೆ ಇತರ ಮುಖಂಡರು ತೆರಳಿದ್ದರು.

 

Leave a Reply

comments

Related Articles

error: