ಮೈಸೂರು

ಕೆಂಪೇಗೌಡರ ಜಯಂತೋತ್ಸವದ ಅದ್ಧೂರಿ ಆಚರಣೆ

ಮೈಸೂರು,ಜು,18:- ನಾಡಪ್ರಭು ಕೆಂಪೇಗೌಡರ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.  ಆದಿಚುಂಚನಗಿರಿ ಮೈಸೂರು ಶಾಖಾ ಮಠದ  ನಿರ್ಮಲಾನಂದನಾಥ ಸ್ವಾಮೀಜಿಯವರು ಕೆಂಪೇಗೌಡರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಉತ್ಸವಕ್ಕೆ ಚಾಲನೆ ನೀಡಿದರು.
ಸ್ವಾಮೀಜಿಯವರಿಗೆ ಪೂರ್ಣ ಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು. ಜಯಂತ್ಯೋತ್ಸವದಲ್ಲಿ ವೀರಗಾಸೆ, ನಂದಿಕಂಬ, ಕಂಸಾಳೆ , ಗಾರುಡಿ ಗೊಂಬೆ, ಪೂಜಾ ಕುಣಿತ, ಹುಲಿವೇಷ, ಮರಗಾಲು ಕುಣಿತ ಹಾಗೂ ಬಸವ ಇನ್ನೂ ಅನೇಕ ಸಾಂಸ್ಕೃತಿಕ ಕಲಾ ತಂಡಗಗಳು  ಮೆರವಣಿಗೆಯಲ್ಲಿ ಪಾಲ್ಗೊಂಡು  ಪಟ್ಟಣದ ಚಿಂತಾಮಣಿ ಗಣಪತಿ ದೇವಾಲಯದಿಂದ ಶ್ರೀಕಂಠೇಶ್ವರ ಕಲಾ ಮಂದಿರದವರೆಗೆ ಸಾಗಿ ಬಂತು.
ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಕೇಶವಮೂರ್ತಿ, ನಗರಸಭಾ ಅಧ್ಯಕ್ಷರು, ಸದಸ್ಯರು ಸ್ಥಳೀಯರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: