ಸುದ್ದಿ ಸಂಕ್ಷಿಪ್ತ

ಜು.20 ರಂದು ‘ತಮಗಿದೋ ನಮ್ಮ ಗೌರವ ನಮನ’ ಕಾರ್ಯಕ್ರಮ

ಮಡಿಕೇರಿ, ಜು.19: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ  ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ ವರ್ಷಾಚರಣೆ ಪ್ರಯುಕ್ತ ತಮಗಿದೋ ನಮ್ಮ ಗೌರವ ನಮನ ಕಾರ್ಯಕ್ರಮವು ಜುಲೈ, 20 ರಂದು ಮಧ್ಯಾಹ್ನ 3.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿ.ಪಂ. ಅಧ್ಯಕ್ಷರಾದ ಬಿ.ಎ.ಹರೀಶ್, ಸಂಸದರಾದ ಪ್ರತಾಪ್ ಸಿಂಹ, ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಎಂ.ಪದ್ಮಿನಿ ಪೊನ್ನಪ್ಪ, ಜಿ.ಪಂ. ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿ.ಪಂ.ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಂ.ಕೆ.ವಿಜು ಸುಬ್ರಮಣಿ, ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ಮಡಿಕೇರಿ ತಾ.ಪಂ. ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಿಂದಿ ಉಪನ್ಯಾಸಕರಾದ ಡಾ.ಶ್ರೀಧರ್ ಹೆಗ್ಗಡೆ ಇತರರು ಪಾಲ್ಗೊಳ್ಳಲಿದ್ದಾರೆ. (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: