
ಮೈಸೂರು
ಜುಲೈ 20 ರಂದು ಕಲಾಮಂದಿರದಲ್ಲಿ “ಯುಗ ಪುರುಷ ಮಹಾತ್ಮರ ಮಹಾತ್ಮ” ನಾಟಕ ಪ್ರದರ್ಶನ
ಮೈಸೂರು, ಜುಲೈ 19 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸ್ವಚ್ಫ ಭಾರತ್ ಮಿಷನ್ ಕಾರ್ಯಕ್ರಮದಡಿ ಜುಲೈ 20 ರಂದು ಸಂಜೆ 6 ಗಂಟೆಗೆ ಕಲಾಮಂದಿರದಲ್ಲಿ ಯುಗ ಪುರುಷ ಮಹಾತ್ಮರ ಮಹಾತ್ಮ ನಾಟಕ ಪ್ರದರ್ಶನ ನಡೆಯಲಿದೆ. ಲೋಕೋಪಯೋಗಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ|| ಹೆಚ್.ಸಿ. ಮಹದೇವಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ವಾಸು ಅವರು ಅಧ್ಯಕ್ಷತೆ ವಹಿಸುವರು. ರಾಮಕೃಷ್ಣ ಆಶ್ರಮದ ಪೂಜ್ಯ ಸ್ವಾಮಿ ಆತ್ಮಜ್ಞಾನಂದಜೀ ಮಹಾರಾಜ್ ಅವರು ದಿವ್ಯ ಸಾನಿಧ್ಯ ವಹಿಸುವರು.
ಪ್ರಾಥಮಿಕ ಹಾಗೂ ಫ್ರೌಢಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ತನ್ವೀರ್ ಸೇಠ್, ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಎಂ.ಜೆ. ರವಿಕುಮಾರ್, ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಹೀಮಾ ಸುಲ್ತಾನ ನಜೀರ್ ಅಹಮದ್, ಲೋಕಸಭಾ ಸದಸ್ಯರುಗಳಾದ ಪ್ರತಾಪಸಿಂಹ, ಆರ್. ಧ್ರುವನಾರಾಯಣ್, ಸಿ.ಎಸ್. ಪುಟ್ಟರಾಜು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಶಾಸಕರಾದ ಕೆ. ವೆಂಕಟೇಶ್, ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಹೆಚ್.ಸಿ.ಮಂಜುನಾಥ್, ರೇಷ್ಮೆ ಉದ್ಯಮಗಳ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಂ.ಕೆ. ಸೋಮಶೇಖರ್, ಶಾಸಕರಾದ ಸಾ.ರಾ. ಮಹೇಶ್, ಜಿ.ಟಿ. ದೇವೇಗೌಡ, ಚಿಕ್ಕಮಾದು, ಕಳಲೆ ಕೇಶವಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ಕೆ.ಬಿ. ಶ್ರೀಕಂಠೇಗೌಡ, ಎಸ್. ನಾಗರಾಜು, ಆರ್. ಧರ್ಮಸೇನ, ಕೆ.ವಿ.ನಾರಾಯಣಸ್ವಾಮಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಧ್ರುವಕುಮಾರ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಜು, ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ ಹೆಚ್.ಎ. ವೆಂಕಟೇಶ್, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷೆ ಮಲ್ಲಿಗೆ ವೀರೇಶ್, ಕಾವೇರಿ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್. ನಂಜಪ್ಪ, ಕರ್ನಾಟಕ ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ನಂದಕುಮಾರ್, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸೀತಾರಾಮು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಬಿ. ನಟರಾಜು, ತಾಲ್ಲೂಕು ಪಂಚಾಯತ್ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ, ಗಾಂಧಿಭವನದ ನಿರ್ದೇಶಕ ಪ್ರೊ. ಶಿವರಾಜಪ್ಪ ಹಾಗೂ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವರು.
-ಎನ್.ಬಿ.