ಮೈಸೂರು

ಸಮುದಾಯದ ಪ್ರಗತಿಗೆ ಯುವಜನತೆ ಹೆಚ್ಚಿನ ಗಮನ ನೀಡಿ: ಕೆ.ಎನ್.ವೆಂಕಟನಾರಾಯಣ್ ಕರೆ

ಬ್ರಾಹ್ಮಣ ಸಮುದಾಯದ ಪ್ರಗತಿಗೆ ಯುವಜನತೆ ಹೆಚ್ಚಿನ ಗಮನ ನೀಡಬೇಕು ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯಾಧ್ಯಕ್ಷ ಕೆ.ಎನ್.ವೆಂಕಟನಾರಾಯಣ್ ಬ್ರಾಹ್ಮಣ ಸಮುದಾಯದ ಯುವಜನತೆಗೆ ಕರೆ ನೀಡಿದರು.

ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಆಶ್ರಯದಲ್ಲಿ ವಿದ್ಯಾಶಂಕರ ನಿಲಯದ ಆವರಣದಲ್ಲಿ ಎರಡು ದಿನಗಳ ಕಾಲ ನಡೆದ ರಾಜ್ಯ ಮಟ್ಟದ ಬ್ರಾಹ್ಮಣ ಯುವ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ವೆಂಕಟನಾರಾಯಣ್ ಮಾತನಾಡಿದರು,

ಬ್ರಾಹ್ಮಣರು ಸಣ್ಣಪುಟ್ಟ ವಿಷಯಗಳಿಗೆ ಕಚ್ಚಾಡದೇ ಒಗ್ಗಟ್ಟು ಪ್ರದರ್ಶಿಸಬೇಕು. ಆರೋಗ್ಯಕರ ಸಮಾಜ ನಿರ್ಮಾಣ ಮಾಡುವಲ್ಲಿ ಬ್ರಾಹ್ಮಣ ಸಮಾಜ ತನ್ನದೇ ಆದ ಕೊಡುಗೆಗಳನ್ನು ನೀಡಿದೆ ಎಂದರು.

ಮಾಜಿ ಸಚಿವ ಎಸ್.ಎ.ರಾಮದಾಸ್ ಮಾತನಾಡಿ ಮುಖ್ಯಮಂತ್ರಿಗಳು ಬ್ರಾಹ್ಮಣ ಸಮುದಾಯದ ಮೇಲೆ ಅವಹೇಳನಕಾರಿ ಮಾತುಗಳನ್ನು ಆಡುತ್ತಾರೆ. ಒಂದು ಸಮುದಾಯದ ಬಗ್ಗೆ ತುಚ್ಛವಾಗಿ ಮಾತನಾಡುವುದು ಸರಿಯಲ್ಲ. ಮುಖ್ಯಮಂತ್ರಿಗಳು ಎಲ್ಲ ಸಮುದಾಯದವರನ್ನು ಸಮಾನವಾಗಿ ಕಾಣಬೇಕು. ಉಡುಪಿ ಮತ್ತು ಶ್ರೀರಾಮಚಂದ್ರಾಪುರ ಮಠ ವಿಚಾರಗಳನ್ನು ತೆಗೆದುಕೊಂಡು ಸಮಾಜವನ್ನು ಒಡೆಯುವ ಕೆಲಸ ಮಾಡಲಾಗುತ್ತಿದೆ ಇದು ಸರಿಯಲ್ಲ ಎಂದು ತಿಳಿಸಿದರು.

ಸಮಾವೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಕುಟುಂಬಗಳಿಗೆ ಸರ್ಕಾರಿ ಸವಲತ್ತುಗಳನ್ನು ನೀಡಬೇಕೆಂದು ಒತ್ತಾಯಿಸಲಾಯಿತಲ್ಲದೇ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಹಲವು ಸಾಧಕರಿಗೆ ವಿಪ್ರ ಸೇವಾ ರತ್ನ ಪ್ರಶಸ್ತಿ ಪ್ರಧಾನಿಸಲಾಯಿತು. ವೇದಿಕೆಯಲ್ಲಿ ರಾಮಾನುಜ ನಾರಾಯಣ ಜೀಯರ್ ಸ್ವಾಮೀಜಿ, ಶಾಸಕ ಪ್ರಸನ್ನಕುಮಾರ್, ನಗರಪಾಲಿಕೆ ಸದಸ್ಯ ಮಾ.ವಿ.ರಾಮಪ್ರಸಾದ್, ಜಿಲ್ಲಾ ಬ್ರಾಹ್ಮಣ ಸಭಾ ಅಧ್ಯಕ್ಷ ಡಿ.ಟಿ.ಪ್ರಕಾಶ್, ಡಾ.ಭಾನುಪ್ರಕಾಶ್ ಶರ್ಮ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: