ಕರ್ನಾಟಕಮೈಸೂರು

ಬಸ್ ಡಿಪೋದಲ್ಲಿ ಕಳ್ಳರ ಕೈಚಳಕ: 28ಲಕ್ಷ ರೂ. ದೋಚಿದ ಕಳ್ಳರು

ಚಾಮರಾಜ ನಗರದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಪೋದಲ್ಲಿ  ಇರಿಸಲಾದ ಸುಮಾರು 28ಲಕ್ಷ ರೂ.ನಗದನ್ನು ಯಾರೋ ಕಳ್ಳರು ಭಾನುವಾರ ರಾತ್ರಿ ಅಪಹರಿಸಿರುವ ಘಟನೆ ನಡೆದಿದ್ದು, ತಪಾಸಣೆ ಹಿನ್ನೆಲೆಯಲ್ಲಿ ಸ್ವಲ್ಪ ಹೊತ್ತು ಡಿಪೋದಿಂದ ಬಸ್ ಹೊರಗೆ ಬಾರದೇ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುವಂತಾಗಿತ್ತು.

ಚಾಮರಾಜ ನಗರದ ಸತ್ತಿ ರಸ್ತೆಯಲ್ಲಿರುವ ಡಿಪೋದಲ್ಲಿ ಸೋಮವಾರ ಬೆಳಗಿನ ಜಾವ ಮೂರು ಗಂಟೆಯ ಸುಮಾರಿಗೆ ಕಳ್ಳತನ ಕೃತ್ಯ ನಡೆದಿದೆ ಎನ್ನಲಾಗಿದೆ.  ಡಿಪೋ ಶೆಲ್ಟರ್ ಮುರಿದು ಒಳನುಗ್ಗಿರುವ ಕಳ್ಳರು ಸುಮಾರು 28ಲಕ್ಷ ರೂ. ನಗದನ್ನು ದೋಚಿದ್ದಾರೆ ಎಂದು ತಿಳಿದು ಬಂದಿದೆ.

ಸೋಮವಾರ ಬೆಳಿಗ್ಗೆ ಡಿಪೋ ಸಿಬ್ಬಂದಿಗಳು ಡಿಪೋಕ್ಕೆ ಆಗಮಿಸುತ್ತಿದ್ದಂತೆ ಶೆಟರ್ ಮುರಿದಿರುವುದು ಗಮನಕ್ಕೆ ಬಂದಿದೆ. ಒಳಗೆ ಹೋಗಿ ನೋಡಲಾಗಿ ಎಲ್ಲ ವಸ್ತುಗಳು, ಕಡತಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಗೋಚರಿಸಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಚಾಲಕ-ನಿರ್ವಾಹಕ ಡಿಪೋ ಸಿಬ್ಬಂದಿ ಸೇರಿದಂತೆ ಪೊಲೀಸರು ಎಲ್ಲರನ್ನೂ ತಪಾಸಣೆಗೊಳಪಡಿಸುತ್ತಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ.

ತಪಾಸಣೆಯಿಂದಾಗಿ ಡಿಪೋದಿಂದ ಬಸ್ಸುಗಳು ಹೊರಗೆ ಬಾರದೇ ಇರುವುದರಿಂದ ಕೆಲಕಾಲ ಪ್ರಯಾಣಿಕರು ಪರದಾಡುವಂತಾಯಿತು.

ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: