ಮೈಸೂರು

ತಮಗಿದೋ ನಮ್ಮ ಗೌರವ ನಮನ ಕಾರ್ಯಕ್ರಮಕ್ಕೆ ಚಾಲನೆ

ಮೈಸೂರು, ಜು.೨೦: ಡಾ.ಬಿ.ಆರ್.ಅಂಬೇಡ್ಕರ್ ಅವರ ೧೨೬ನೇ ಜನ್ಮದಿನಾಚರಣೆ ಪ್ರಯುಕ್ತ ಆಯೋಜಿಸಿರುವ ತಮಗಿದೋ ನಮ್ಮ ಗೌರವ ನಮನ ಕಾರ್ಯಕ್ರಮದ ಅಂಗವಾಗಿ ಪುರಭವನದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಮೇಯರ್ ಎಂ.ಜೆ.ರವಿಕುಮಾರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಅಂಬೇಡ್ಕರ್ ವಿಶ್ವನಾಯಕರಾಗಿದ್ದು, ಅವರು ದೇಶಕ್ಕಾಗಿ ನೀಡಿದ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಎಲ್ಲರ ಅಭಿವೃದ್ಧಿಯನ್ನೂ ಒಳಗೊಳ್ಳುವ ಸಮಾಜದ ಅಭಿವೃದ್ಧಿಯಾದಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂಬ ಆಶಯದೊಂದಿಗೆ ಎಲ್ಲರ ಏಳಿಗೆಗಾಗಿ ದುಡಿದರು. ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ ಎಂದು ಹೇಳಿದರು.
ಈ ವೇಳೆ ವಿವಿಧ ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಜಿಲ್ಲಾಧಿಕಾರಿ ಡಿ.ರಂದೀಪ್, ಮೈಲ್ಯಾಕ್ ಅಧ್ಯಕ್ಷ ಹೆಚ್.ಎ.ವೆಂಕಟೇಶ್, ಉಪಮೇಯರ್ ರತ್ನ ಲಕ್ಷ್ಮಣ್, ಜಿಪಂ ಸಿಇಓ ಶಿವಶಂಕರ್, ಮಾಜಿ ಮೇಯರ್ ಪುರುಷೋತ್ತಮ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: