ಮೈಸೂರು

ಹಿಂದೂ ಕಾರ್ಯಕರ್ತರ ಹತ್ಯೆ; ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ: ರಾಮದಾಸ್ ಆರೋಪ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಹೆಚ್ಚಾಗಿದೆ ಎಂದು ಮಾಜಿ ಸಚಿವ ಎಸ್.ಎ.ರಾಮದಾಸ್ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಆರ್.ಎಸ್.ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆಯನ್ನು ಖಂಡಿಸಿ ಮೈಸೂರಿನ ಗಾಂಧಿವೃತ್ತದಲ್ಲಿ ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ಮಾಜಿ ಸಚಿವ ರಾಮದಾಸ್ ಮಾತನಾಡಿ ರಾಜ್ಯದ ವಿವಿಧೆಡೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಹತ್ಯೆ ನಡೆಯುತ್ತಿದ್ದರೂ ಸಹ ರಾಜ್ಯ ಸರ್ಕಾರ ಸೂಕ್ತ ಕ್ರಮವನ್ನು ಕೈಗೊಳ್ಳುತ್ತಿಲ್ಲ. ಪಾಕಿಸ್ತಾನದ ಮೇಲೆ ಸರ್ಜಿಕಲ್ ದಾಳಿ ನಡೆದ ನಂತರ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಗಳನ್ನು ನಡೆಸುವುದಾಗಿ ಭಯೋತ್ಪಾದಕ ಸಂಘಟನೆಗಳು ಬೆದರಿಕೆ ಹಾಕಿದ್ದವು. ಇದಕ್ಕೆ ಕೇರಳದಲ್ಲಿ ನಡೆದ ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣವೇ ಸಾಕ್ಷಿಯಾಗಿದೆ. ಇದೀಗ ಬೆಂಗಳೂರಿನಲ್ಲೂ ರುದ್ರೇಶ್ ಹತ್ಯೆ ನಡೆದಿದೆ. ರುದ್ರೇಶ್  ಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ನಗರಾಧ್ಯಕ್ಷ ಡಾ.ಮಂಜುನಾಥ, ಹೆಚ್.ವಿ.ರಾಜೀವ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

Leave a Reply

comments

Related Articles

error: