ಮೈಸೂರು

ಗೋ ಕಿಂಕರ ಯಾತ್ರೆಗೆ ಮೈಸೂರಿನಲ್ಲಿ ಅದ್ಧೂರಿ ಸ್ವಾಗತ

ಮೈಸೂರಿನ ಚಾಮುಂಡಿಪುರಂನಲ್ಲಿರುವ ವೇಣು ಗೋಪಾಲಸ್ವಾಮಿ ದೇವಸ್ಥಾನದ ಬಳಿ ಶಿವಮೊಗ್ಗದ ಹೊಸನಗರ ತಾಲೂಕಿನ ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ಆಯೋಜಿಸಿದ ಗೋಕಿಂಕರ ಯಾತ್ರೆಯನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಅದ್ಧೂರಿಯಾಗಿ ಬರ ಮಾಡಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹಸುವಿನ ಕರುವಿಗೆ ಹಸಿರು ಹುಲ್ಲನ್ನು ತಿನ್ನಿಸುವ ಮೂಲಕ ಮೈಸೂರಿನಲ್ಲಿ ಯಾತ್ರೆಗೆ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಕೇಂದ್ರ ಸರ್ಕಾರ ಗೋಹತ್ಯೆಯನ್ನು ನಿಷೇಧಿಸಿದೆ. ಆದರೂ ಕೆಲವೆಡೆ ಗೋಹತ್ಯೆ ನಿರಂತರವಾಗಿ ನಡೆಯುತ್ತಲೇ ಇದೆ. ಈ ಕುರಿತು ಜನರು ಜಾಗೃತರಾಗಬೇಕು. ಗೋ ಸಂರಕ್ಷಣೆಗೆ ಮುಂದಾಗಬೇಕು ಎಂದರು.

ಗೋಕಿಂಕರ ಯಾತ್ರೆಯು ಮೈಸೂರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಗೋಯಾತ್ರೆಯು 80ಕ್ಕೂ ಹೆಚ್ಚು ದಿನಗಳು ನಡೆಯಲಿದ್ದು, 250ಕ್ಕೂ ಹೆಚ್ಚು ನಗರಗಳನ್ನು ಹಾದುಹೋಗಲಿದೆ. 500ಕ್ಕೂ ಹೆಚ್ಚು ಪಟ್ಟಣಗಳನ್ನು ತಲುಪಲಿದ್ದು, ಸಾವಿರಾರು ಹಳ್ಳಿಗಳಲ್ಲಿ ಸಂಚಲನ ಮೂಡಿಸಲಿದೆ.

ಜಗದ್ಗುರು ಶಂಕರಾಚಾರ್ಯ ರಾಘವೇಶ್ವರ ಭಾರತೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕಳೆದೆರಡು ದಶಕಗಳಿಂದ ಅನೇಕ ರೀತಿಯ ಕಾರ್ಯಕ್ರಮಗಳು ದೇಶವ್ಯಾಪಿ ನಡೆದಿದ್ದು  ಭಾರತೀಯ ಗೋತಳಿಗಳನ್ನು ಉಳಿಸಿ ಬೆಳೆಸುವ ಕಾರ್ಯಕ್ಕೆ ಮಹತ್ವದ ಕೊಡುಗೆಯನ್ನು ನೀಡಿದೆ.

Leave a Reply

comments

Related Articles

error: