ಮೈಸೂರು

ಗ್ರಾಹಕನ ಸೋಗಿನಲ್ಲಿ ಬಂದು ಶೂ ಕಳ್ಳತನ

ಮೈಸೂರು,ಜು.21:- ಪಾದರಕ್ಷೆಗಳ ಮಾರಾಟ ಮಳಿಗೆಯಲ್ಲಿ ಗ್ರಾಹಕನ ಸೋಗಿನಲ್ಲಿ ಬಂದು ಶೂ ಕಳ್ಳತನ ಮಾಡಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿರುವ ಬಾಟಾ ಶೋ ರೂಂ ಮಳಿಗೆಯಲ್ಲಿ ಕಳ್ಳನೋರ್ವ ಗ್ರಾಹಕನ ಸೋಗಿನಲ್ಲಿ ಬಂದು ಶೂವನ್ನು ಕಾಲಿಗೆ ಧರಿಸಿ ಹಣ ನೀಡದೇ ಪರಾರಿಯಾಗಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜುಲೈ 13ರಂದು  ಘಟನೆ ನಡೆದಿದ್ದು,
ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: