ಕರ್ನಾಟಕಪ್ರಮುಖ ಸುದ್ದಿಮೈಸೂರು

ವಿ. ಶ್ರೀನಿವಾಸ ಪ್ರಸಾದ್ ಶಾಸಕ ಸ್ಥಾನಕ್ಕೆ ರಾಜೀನಾಮೆ

ಮಾಜಿ ಕಂದಾಯ ಸಚಿವ ಹಾಗೂ ಶಾಸಕ ವಿ. ಶ್ರೀನಿವಾಸ ಪ್ರಸಾದ್ ಪೂರ್ವ ನಿರ್ಧಾರದಂತೆ ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

ಇಂದು ಮಧ್ಯಾಹ್ನ 12 ಗಂಟೆಗೆ ವಿಧಾನಸಭಾ ಸ್ಪೀಕರ್ ಕಚೇರಿಯಲ್ಲಿ ಎರಡು ಸಾಲುಗಳ ಸ್ವ-ಹಸ್ತಾಕ್ಷರದ ರಾಜೀನಾಮೆ ಪತ್ರವನ್ನು ಸ್ಪೀಕರ್ ಕೆ.ಬಿ. ಕೋಳಿವಾಡ ಅವರಿಗೆ ಸಲ್ಲಿಸಿ ನನ್ನ ನಿರ್ಧಾರಕ್ಕೆ ಒತ್ತಡವಾಗಲಿ ಅಥವಾ ಅಮಿಷವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿ. ಈ ಬಗ್ಗೆ ಕ್ಷೇತ್ರದ ಜನತೆಯೊಂದಿಗೆ ಸುದೀರ್ಘ ಸಮಾಲೋಚನೆ ಹಾಗೂ ಚರ್ಚೆಯನ್ನು ನಡೆಸಿ ರಾಜೀನಾಮೆ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದರು. ರಾಜೀನಾಮೆ ನೀಡಿ ಎಲ್ಲಾ ವದಂತಿಗಳಿಗೂ ತೆರೆ ಎಳೆದಿದ್ದಾರೆ. ಅವರು, ಕಾಂಗ್ರೆಸ್ ನ ಪ್ರಾಥಮಿಕ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಆಪ್ತವಲಯದಲ್ಲಿ ಕೇಳಿ ಬರುತ್ತಿದೆ.

ಕಾಂಗ್ರೆಸ್ ಸರ್ಕಾರದ ಮಂತ್ರಿಮಂಡಲದ ಪುನಾರಚನೆಯ ವೇಳೆಯಲ್ಲಿ ವಿ. ಶ್ರೀನಿವಾಸ ಪ್ರಸಾದ್ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಕಾರ್ಯ ವೈಖರಿಗೆ ಅಸಮಾಧಾನ ವ್ಯಕ್ತಪಡಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮಾಡಿದ್ದರು. ಮೈಸೂರು ಸೇರಿದಂತೆ ಕಾವೇರಿ ಕೊಳದ ಭಾಗದಲ್ಲಿ ಹಲವಾರು ದಿನಗಳ ಕಾಲ ನಡೆದ ಕಾವೇರಿ ನದಿ ನೀರು ಹಂಚಿಕೆಯ ಪ್ರತಿಭಟನೆ ಹಾಗೂ ಧರಣಿ ಹಿನ್ನಲೆಯಲ್ಲಿ ರಾಜೀನಾಮೆಗೆ ವಿಳಂಬವಾಯಿತು ಎನ್ನಲಾಗಿದೆ. ಪ್ರಸಾದ್ ಅವರನ್ನು ತಮ್ಮತ್ತ ಸೆಳೆಯಲು ಈಗಾಗಲೇ ರಾಜ್ಯದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಪ್ರಯತ್ನ ಮಾಡಿವೆ. ಆದರೆ, ಪ್ರಸಾದ್ ಅವರು ತಮ್ಮ ಮುಂದಿನ ನಡೆಯ ಕುರಿತು ಗುಟ್ಟು ಬಿಟ್ಟುಕೊಟ್ಟಿಲ್ಲ.

Leave a Reply

comments

Related Articles

error: