ಸುದ್ದಿ ಸಂಕ್ಷಿಪ್ತ

ಜು.22 ರಂದು ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ಮಡಿಕೇರಿ, ಜು.21: ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ ಅವರು ಜುಲೈ, 22 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಜುಲೈ, 22 ರಂದು ಬೆಳಗ್ಗೆ 11 ಗಂಟೆಗೆ ಸೋಮವಾರಪೇಟೆ ತಾಲ್ಲೂಕು, ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆಯುವ ಯಡವನಾಡು ಹಾಗೂ ಅತ್ತೂರು ಗ್ರಾಮಗಳ ಭೂಮಿಯನ್ನು ಕಂದಾಯ ಗ್ರಾಮವನ್ನಾಗಿ ಘೋಷಿಸಿ, ಸಂತ್ರಸ್ಥರಿಗೆ ಭೂಮಿಯನ್ನು ಹಸ್ತಾಂತರಿಸುವ ಸಂಬಂಧ ಫಲಾನುಭವಿಗಳಿಗೆ ಹಕ್ಕುಪತ್ರ (ಆರ್.ಟಿ.ಸಿ) ಮತ್ತು ನಿಯಮ 94ಸಿ ಮತ್ತು 94ಸಿಸಿ ರಡಿಯಲ್ಲಿ ನಿವೇಶನ ಮಂಜೂರಾಗಿರುವ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ನಂತರ ಮಧ್ಯಾಹ್ನ 12.30 ಗಂಟೆಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕ್ರಿಶ್ಚಿಯನ್ ಮಹಿಳೆಯರಿಗೆ ಬಿದಾಯಿ ಯೋಜನೆಯಡಿ ಸವಲತ್ತು ವಿತರಣೆ ಮಾಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಅವರು ತಿಳಿಸಿದ್ದಾರೆ. (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: