ಕರ್ನಾಟಕ

ಕುಡಿದ ಮತ್ತಿನಲ್ಲಿ ಪತ್ನಿಯ ಕೊಲೆಗೈದ ಪತಿ

ರಾಜ್ಯ(ಬೆಂಗಳೂರು)ಜು.22:-ಕುಡಿದ ಅಮಲಿನಲ್ಲಿ  ಪತಿಯೇ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ  ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಳನ್ನು ಗಾಯತ್ರಿ(27) ಎಂದು ಗುರುತಿಸಲಾಗಿದೆ.  ಪತಿ ನಾಗರಾಜು ಪ್ರತಿ ನಿತ್ಯ ಕುಡಿದು ಬಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ನಾಗರಾಜು  ಪೋಲೀಸರಿಗೆ ಶರಣಾಗಿದ್ದು, ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ರಾತ್ರಿ ಕೊಲೆಗೈದು ಬೆಳಿಗ್ಗೆ ಗ್ರಾಮಾಂತರ ಪೊಲೀಸರಿಗೆ ಶರಣಾಗಿದ್ದಾನೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: