ಕರ್ನಾಟಕಮೈಸೂರು

ಜುಲೈ 24ರಂದು ವಿಶ್ವ ಜನಸಂಖ್ಯಾ ದಿನಾಚರಣೆ

ಮಂಡ್ಯ, ಜುಲೈ 22 : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಿಮ್ಸ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ವಿವಿಧ ಇಲಾಖೆಗಳು ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ಜುಲೈ 24 ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡ್ಯ ವಿಧಾನಸಭೆ ಕ್ಷೇತ್ರದ ಶಾಸಕರಾದ ಡಾ. ಎಂ.ಹೆಚ್ .ಅಂಬರೀಶ್ ಅವರು ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ವಸತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಕೃಷ್ಣಪ್ಪ ಅವರು ನಡೆಸಿಕೊಡುವರು. ಅಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿಯಿಂದ ಕಲಾಮಂದಿರದವರೆಗೆ ಜಾಗೃತಿ ಜಾಥಾ ಹೊರಡುವುದು. ಜಾಥಾ ಉದ್ಘಾಟನಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳಾದ ಎಸ್.ಜಿಯಾವುಲ್ಲಾ ಅವರು ನಡೆಸಿಕೊಡುವರು.

-ಎನ್.ಬಿ.

Leave a Reply

comments

Related Articles

error: