ಸುದ್ದಿ ಸಂಕ್ಷಿಪ್ತ

ಸಹಾಯಧನಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ

ಮಡಿಕೇರಿ ಜು.22:-2015-16 ಮತ್ತು 2016-17ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಉಪ ಯೋಜನೆಯಡಿ ಪರಿಶಿಷ್ಟ ಪಂಗಡದವರ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿಯೋಜನೆಯಡಿ ಯರವ, ಕುಡಿಯ, ಕುರುಬ (ಕೊಡಗು ಜಿಲ್ಲೆಯಲ್ಲಿ) ಸಮುದಾಯಗಳ ಕಲಾವಿದರಿಗೆ ಅಗತ್ಯ ವಾದ್ಯ ಪರಿಕರ ಮತ್ತು ವೇಷಭೂಷಣ ಖರೀದಿಸಲು ಸಹಾಯಧನ ಒದಗಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಜನಾಂಗದ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್, 11 ಕೊನೆಯ ದಿನವಾಗಿದೆ.

ಅರ್ಜಿಯನ್ನು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ-08274-261261, ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552 ಹಾಗೂ ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115 ಇಲ್ಲಿಂದ ಪಡೆಯಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ  ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: