ಮೈಸೂರು

ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯ ಕೊಲೆ

murder-2ಕೆ.ಆರ್.ರಸ್ತೆಯ ಪಾಳು ಜಾಗವೊಂದರಲ್ಲಿ ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳು ಮಾರಕಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆಗೈದ ಘಟನೆ ಮಂಗಳವಾರ ಮುಂಜಾನೆ ಬೆಳಕಿಗೆ ಬಂದಿದೆ.

ಕೊಲೆಯಾದ ವ್ಯಕ್ತಿಯನ್ನು ಬಸವರಾಜು(32) ಎಂದು ಗುರುತಿಸಲಾಗಿದೆ. ಇವರು ಮೂಲತಃ ಗದಗ ಜಿಲ್ಲೆಯವರಾಗಿದ್ದು, ಹೆಬ್ಬಾಳದ ಕೈಗಾರಿಕಾ ಪ್ರದೇಶದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಸೋಮವಾರ ಮಧ್ಯರಾತ್ರಿ 12.30ರ ಸುಮಾರಿಗೆ ಈ ಕೃತ್ಯ ನಡೆದಿರಬೇಕೆಂದು ಶಂಕಿಸಲಾಗಿದೆ. ಮಂಗಳವಾರ ಬೆಳಿಗ್ಗೆ ವಾಯುವಿಹಾರಕ್ಕೆಂದು ತೆರಳಿದವರಿಗೆ ರಕ್ತಸಿಕ್ತವಾದ ಶವ ಗೋಚರಿಸಿದ್ದು ತಕ್ಷಣ ಅವರು ಸ್ಥಳೀಯ ಠಾಣೆಗೆ ಮಾಹಿತಿ ನೀಡಿದರು ಎನ್ನಲಾಗಿದೆ.  ಹಳೆಯ ವೈಷಮ್ಯವೇ ಕೊಲೆಗೆ ಕಾರಣವಿರಬೇಕೆಂದು ಶಂಕಿಸಲಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಮೇಟಗಳ್ಳಿ ಪೊಲೀಸ್ ಇನ್ಸಪೆಕ್ಟರ್ ಸುನಿಲ್ ಮತ್ತು ಸಬ್ ಇನ್ಸಪೆಕ್ಟರ್ ಕುಮಾರ್ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಶ್ವಾನದಳವೂ ಭೇಟಿ ನೀಡಿದ್ದು, ತನಿಖೆ ಮುಂದುವರಿದಿದೆ.

ಮೇಟಗಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶವವನ್ನು ಕೆ.ಆರ್.ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

Leave a Reply

comments

Related Articles

error: