ಪ್ರಮುಖ ಸುದ್ದಿಮೈಸೂರು

ಲಾರಿ ಡಿಕ್ಕಿ ಬೈಕ್ ಸವಾರ ಸಾವು

ಮೈಸೂರು,ಜು.23:- ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಜರಾಜೇಶ್ವರಿ ನಗರದ ಬಳಿಯ ರಿಂಗ್ ರಸ್ತೆಯಲ್ಲಿ ನಡೆದಿದೆ.

ಮೃತರನ್ನು  ವಿವೇಕಾನಂದ ನಗರದ ನಿವಾಸಿ ರಾಮಚಂದ್ರ(53) ಎಂದು ಗುರುತಿಸಲಾಗಿದೆ. ರಾಮಚಂದ್ರ ಹಿನಕಲ್ ಕಡೆಯಿಂದ ವಿವೇಕಾನಂದ ನಗರಕ್ಕೆ ಹೋಗುವ ವೇಳೆ ಹಿಂಭಾಗದಿಂದ ವೇಗವಾಗಿ ಬರುತ್ತಿದ್ದ ಲಾರಿ ಬೈಗೆ ಡಿಕ್ಕಿಯಾಗಿದೆ. ಇದರಿಂದ ಕೆಳಕ್ಕುರುಳಿದ ಸವಾರ ಹೆಲ್ಮೆಟ್ ಧರಿಸಿದ್ದರೂ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೆ.ಆರ್.ಸಂಚಾರ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: