ಕರ್ನಾಟಕಪ್ರಮುಖ ಸುದ್ದಿ

ಹೃದಯ ಸಂಬಂಧಿ ಕಾಯಿಲೆಯಿಂದ ಯೋಧ ಸಾವು

ರಾಜ್ಯ(ತುಮಕೂರು)ಜು.24:- ಹೃದಯ ಸಂಬಂಧಿ ಕಾಯಿಲೆಯಿಂದ ಜಮ್ಮು ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಿಎಸ್ ಎಫ್ ಯೋಧ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಗ್ರಾಮದ ನಿವಾಸಿ  ಮಂಜುನಾಥ್ (36) ಎಂದು ಗುರುತಿಸಲಾಗಿದೆ.  ಸೋಮವಾರ ಬೆಳಗಿನಜಾವ ಸ್ವಗ್ರಾಮಕ್ಕೆ ಯೋಧನ ಪಾರ್ಥಿವ ಶರೀರ ಆಗಮಿಸಿದ್ದು, ಪತ್ನಿ ಹಾಗೂ ಓರ್ವ ಮಗಳನ್ನು ಅಗಲಿದ್ದಾರೆ. ಕುಟುಂಬದಲ್ಲಿ ಶೋಕ ಮಡುಗಟ್ಟಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: