ಕರ್ನಾಟಕಪ್ರಮುಖ ಸುದ್ದಿ

8 ಕ್ಷೇತ್ರಗಳಲ್ಲಾದರೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸುತ್ತೇನೆ : ಜಮೀರ್ ಅಹ್ಮದ್ ಖಾನ್

ರಾಜ್ಯ(ತುಮಕೂರು)ಜು.24:- ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಮುಸ್ಲಿಂ ಸಮುದಾಯದವರೇ ನಿರ್ಣಾಯಕ ಮತದಾರರಾಗಿದ್ದು, ಕನಿಷ್ಠ 8 ಕ್ಷೇತ್ರಗಳಲ್ಲಾದರೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸುವುದಾಗಿ ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹಮದ್ ಖಾನ್  ಹೇಳಿದರು.
ನಗರದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ನಾನು ಜೆಡಿಎಸ್ ಪಕ್ಷವನ್ನು ತೊರೆದಿದ್ದು, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಅದರಲ್ಲೂ ತುಮಕೂರು ನನ್ನ ಸ್ವಂತ ಜಿಲ್ಲೆಯಾಗಿದೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಸ್ಥಾನದಲ್ಲಿ ಗೆಲ್ಲಬೇಕು ಎಂಬ ಆಸೆ ಹೊಂದಿದ್ದೇನೆ ಎಂದರು. ನಾನು ಜೆಡಿಎಸ್‌ನಲ್ಲಿದ್ದಾಗ ಮುಸ್ಲಿಂರು ನಾನಿದ್ದೇನೆ ಎಂಬ ಕಾರಣಕ್ಕೆ ಆ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕುತ್ತಿದ್ದರು. ಕಳೆದ ಬಾರಿ ಜಿ.ಪಂ., ತಾ.ಪಂ. ಹಾಗೂ ತುಮಕೂರು ವಿಧಾನ ಪರಿಷತ್ ಉಪಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ವರಿಷ್ಠರಾದ ಹೆಚ್.ಡಿ. ದೇವೇಗೌಡ ಅವರು ಜಮೀರ್ ಅಹಮ್ಮದ್ ಖಾನ್ ಮೀರ್ ಸಾಧಿಕ್ ಎಂದು ಹೇಳಿಕೆ ನೀಡಿದ್ದು ಮುಸ್ಲಿಂ ಬಾಂಧವರಿಗೆ ತುಂಬಾ ನೋವುಂಟು ಮಾಡಿತ್ತು ಎಂದರು. ಅಲ್ಲಾಹನ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾನು ವೈಯುಕ್ತಿಕವಾಗಿ ಯಾರಿಗೂ ಜೆಡಿಎಸ್ ಪಕ್ಷಕ್ಕೆ ಮತ ಹಾಕಬಾರದು ಎಂದು ಹೇಳಿಲ್ಲ. ಅವರೇ ಸ್ವಯಂ ಪ್ರೇರಣೆಯಿಂದ ಬೇರೆ ಪಕ್ಷಕ್ಕೆ ಮತ ಹಾಕಿದರು. ಪರಿಣಾಮ ಜಿ.ಪಂ.ನಲ್ಲಿ ಕನಿಷ್ಠ 34 ಸ್ಥಾನ ಗಳಿಸುತ್ತಿದ್ದ ಜೆಡಿಎಸ್ ಕೇವಲ 14 ಸ್ಥಾನ ಗೆಲ್ಲಲು ಮಾತ್ರ ಸಾಧ್ಯವಾಯಿತು. ಮುಸ್ಲಿಂರು ತಮ್ಮ ಶಕ್ತಿಯನ್ನು ತೋರಿಸಿದ್ದಾರೆ ಎಂದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: