ಪ್ರಮುಖ ಸುದ್ದಿವಿದೇಶ

ಕಾಬೂಲ್‍ನಲ್ಲಿ ಆತ್ಮಹತ್ಯಾ ಬಾಂಬ್ ದಾಳಿಗೆ 35 ಮಂದಿ ಸಾವು

ಕಾಬೂಲ್, ಜುಲೈ 24 : ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್‍ನಲ್ಲಿ ಸೋಮವಾರ ಮುಂಜಾನೆ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ 35 ಮಂದಿ ಮೃತಪಟ್ಟು, 30ಕ್ಕೂ ಹೆಚ್ಚು ಜನ ತೀವ್ರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.

ಸ್ಥಳೀಯ ಕಾಲಮಾನ ಬೆಳಗ್ಗೆ 6.40ರ ವೇಳೆಗೆ ಈ ಘಟನೆ ನಡೆದಿದ್ದು, ತಾಲಿಬಾನ್ ಉಗ್ರಗಾಮಿಗಳು ದಾಳಿಯ ಹೊಣೆ ಹೊತ್ತುಕೊಂಡಿದ್ದಾರೆ. ಆಫ್ಘನ್ ಗುಪ್ತಚರ ಇಲಾಖೆ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಅನ್ನು ಗುರಿಮಾಡಿ ದಾಳಿ ನಡೆಸಿರುವುದಾಗಿ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಹೇಳಿಕೊಂಡಿದ್ದಾರೆ.

ಸಾರ್ವಜನಿಕ ಸೇವೆಯಲ್ಲಿರುವವರ ಮೇಲೆ ಉಗ್ರಗಾಮಿಗಳು ದಾಳಿ ನಡೆಸಿರುವುದನ್ನು ಖಂಡಿಸುತ್ತೇನೆ ಎಂದು ಆಫ್ಘಾನಿಸ್ತಾನದ ಮುಖ್ಯಾಧಿಕಾರಿ ಅಬ್ದುಲ್ಲಾ ಅಬ್ದುಲ್ಲಾ ಹೇಳಿದ್ದಾರೆ.

ದಾಳಿಯ ವೇಳೆ ಮೂರು ವಾಹನ, ಹದಿನೈದು ಮಳಿಗೆಗಳು ಕೂಡ ಹಾನಿಗೊಳಗಾಗಿವೆ. ಟೊಯೊಟಾ ಕರೋಲಾ ಕಾರಿನಲ್ಲಿ ಅಡಗಿಸಿಟ್ಟಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ ಸಾವುನೋವು ಸಂಭವಿಸಿದೆ ಎಂದು ಆಂತರಿಕ ಸಚಿವಾಲಯದ ವಕ್ತಾರ ನಜೀಬ್ ದಾನಿಶ್ ತಿಳಿಸಿದ್ದಾರೆ.

-ಎನ್.ಬಿ.

Leave a Reply

comments

Related Articles

error: