ಕರ್ನಾಟಕಮೈಸೂರು

ಜನಸಂಖ್ಯೆ ನಿಯಂತ್ರಣಕ್ಕೆ ನಿರಂತರ ಅರಿವು ಅಗತ್ಯ : ಮಂಡ್ಯ ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ

ಮಂಡ್ಯ ಜುಲೈ, 24 : ಜನಸಂಖ್ಯೆ ನಿಯಂತ್ರಣದ ಬಗ್ಗೆ ಜನತೆಯಲ್ಲಿ ಅರಿವೂ ಮೂಡಿಸುವ ಕಾರ್ಯ ನಿರಂತರವಾಗಿ ನಡೆಸುವುದರಿಂದ ಜನಸಂಖ್ಯೆ ನಿಯಂತ್ರಣ ಸಾಧ್ಯವಾಗುತ್ತದೆ ಎಂದು ಮಂಡ್ಯ ಜಿಲ್ಲಾಧಿಕಾರಿಗಳಾದ ಎಸ್. ಜಿಯಾವುಲ್ಲಾ ಅವರು ತಿಳಿಸಿದರು.

ಅವರು ಇಂದು ಮಂಡ್ಯ ಕಲಾಮಂದಿರದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ದೇಶದ ಅಭಿವೃದ್ಧಿ ಹಾಗೂ ಆರ್ಥಿಕ ಸದೃಢತೆಗೆ ಜನಸಂಖ್ಯೆಯನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ಈ ನಿಟ್ಟಿನಲ್ಲಿ ಆಶಾ ಕಾರ್ಯೆಕರ್ತೆಯರುಹೆಚ್ಚಿನ ಜವಬ್ದಾರಿ ವಹಿಸಿ, ಗ್ರಾಮೀಣಾ ಪ್ರದೇಶದ ಮನೆ ಮನೆಗಳಿಗೆ ಭೇಟಿ ನೀಡಿ ಜನಸಂಖ್ಯೆ ನಿಯಂತ್ರಣದಿಂದ ಆಗುವ ಅನುಕೂಲತೆಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಅವರು ತಿಳಿಸಿದರು.

ಶಿಕ್ಷಣ ಹಾಗೂ ಅರಿವಿನ ಕೊರತೆ ಇರುವ ಕಡೆ ಭೇಟಿ ನೀಡಿ ಜನಸಂಖ್ಯೆ ನಿಯಂತ್ರಣದ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆ ಮುಂದಾಗಬೇಕು. ಪೌರಕಾರ್ಮಿಕರನ್ನು ಹಾಗೂ ವಿವಿಧ ಸಂಘ ಸಂಸ್ಥೆಗಳನ್ನು ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಜನಸಂಖ್ಯೆ ನಿಯಂತ್ರಣದ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮಾಡಬೇಕು ಎಂದು ಅವರು ತಿಳಿಸಿದರು.

ಜನಸಂಖ್ಯೆ ಸ್ಫೋಟದಿಂದ ಆಗುವ ದುಷ್ಪಪರಿಣಾಮಗಳ ಬಗ್ಗೆ ಜನತೆಗೆ ತಿಳಿಸುವ ಕೆಲಸವನ್ನು ಆರೋಗ್ಯ ಇಲಾಖೆ ಮಾಡಬೇಕು. ಅಲ್ಲದೇ ಮಾನವೀಯ ಹಾಗೂ ಸೇವೆಯ ದೃಷ್ಟಿಯಿಂದ ಆರೋಗ್ಯ ಇಲಾಖೆಯ ವೈದ್ಯರು ಹಾಗೂ ಸಿಬ್ಬಂದಿಗಳು ಕೆಲಸನಿರ್ವಹಿಸಬೇಕು ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಮಂಡ್ಯ ಸರ್ಕಾರಿ ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ಸಿದ್ಧಲಿಂಗಪ್ಪ ಅವರು ಮನುಷ್ಯ ಬದುಕುವಂತಗಲು ಜನಸಂಖ್ಯೆ ಸಮತೋಲನ ಅಗತ್ಯವಾಗಿದ್ದು, ಇಂದು ವಿಶ್ವದಲ್ಲಿ 700 ಕೋಟಿ ಜನಸಂಖ್ಯೆ ಇದೆ. ಜನಸಂಖ್ಯೆ ಸ್ಫೋಟದ ದುಷ್ಪಪರಿಣಾಮದ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸಬೇಕು ಎಂದು ಅವರು ತಿಳಿಸಿದರು.

ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡಲು ಆರೋಗ್ಯವಂತ ಮಕ್ಕಳ ಅಗತ್ಯವಿದೆ. ಈ ಹಿನ್ನೇಲೆಯಲ್ಲಿ ಮಕ್ಕಳ ಜನನದಲ್ಲಿಯೂ ಅಂತರವನ್ನು ಕಾಯಬೇಕಿದೆ. ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಎಲ್ಲರೂ ಕೈಜೊಡಿಸಬೇಕು.ಅಲ್ಲದೇ ಸರ್ಕಾರ ಕೂಡಾ ಜನಸಂಖ್ಯೆ ನಿಯಂತ್ರಣದ ಬಗ್ಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ನೆರವಿನಿಂದ ಜನಸಂಖ್ಯೆ ಕಡಿಮೆ ಮಾಡಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷರಾದ ಹೆಚ್.ಸಿ.ಬೋರೆಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಮೋಹನ್, ಮಿಮ್ಸ್ ವೈದ್ಯಕೀಯ ಅಧೀಕ್ಷಕರಾದ ಹನುಮಂತ್ ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ವಾರ್ತಾರ್ಧಿಕಾರಿ ಹರೀಶ್, ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿ ಡಾ. ಕೆ.ಆರ್.ಶಶಿಧರ್ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಶಶಿಧರ್ ಬಸವರಾಜು ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

-ಎನ್.ಬಿ.

Leave a Reply

comments

Related Articles

error: