ಮೈಸೂರು

ಸಿಗುವ ಶಿಕ್ಷಣವನ್ನು ಸದುಪಯೋಗಪಡಿಸಿಕೊಳ್ಳಿ : ಡಾ.ಎಂ.ಮಹೇಶ್

ಮೈಸೂರು,ಜು.25:- ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನೇಹ ಸಿಂಚನ ಮತ್ತು ವಿದ್ಯಾರ್ಥಿ ಪ್ರತಿನಿಧಿಗಳ ಪದಗ್ರಹಣ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ನಗರದ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭವನ್ನು ಹೊಸಮಠದ ಚಿದಾನಂದ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ಡಾ.ಎಂ.ಮಹೇಶ್  ಜ್ಯೋತಿ ಬೆಳಗಿಸುವುದರ ಮೂಲಕ  ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಈ ನಟರಾಜ ಕಾಲೇಜಿನಲ್ಲಿ ಪ್ರಾಥಮಿಕ ಶಿಕ್ಷಣದಿಂದ ಫ್ರೌಡ ಶಿಕ್ಷಣ ಹಾಗೂ ಕಾಲೇಜು ಮಟ್ಟದಲ್ಲಿ ಅದರಲ್ಲಿಯೂ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಹೆಚ್ಚಿನ ಒತ್ತು ನೀಡಿ ಉತ್ತಮ ಶಿಕ್ಷಣ ನೀಡಲಾಗುತ್ತಿರುವುದು ಹೆಮ್ಮೆಯ ವಿಚಾರ. ನಾವು ತಾಯಿಯನ್ನು ದೇವರಂತೆ ಪೂಜಿಸುತ್ತೇವೆ. ತಾಯಿಯೇ ಮೊದಲ ಗುರು. ಮಕ್ಕಳಿಗೆ ತಾಯಿಯಿಂದಲೇ ಮೊದಲು ಅಕ್ಷರಾಭ್ಯಾಸವಾಗುವುದು. ನಂತರದ ಶಿಕ್ಷಣ ಈ ಶಾಲೆಗಳಿಂದಲೇ. ವಿದ್ಯಾರ್ಥಿಗಳು ವಿದ್ಯಾರ್ಥಿಗಳಾಗಿದ್ದಾಗಲೇ ತಮ್ಮ ಕನಸಿನ ಬುತ್ತಿಯನ್ನು ಕಟ್ಟಿಕೊಳ್ಳಬೇಕು.  ಈ ಶಿಕ್ಷಣದ ಅವಧಿಯಲ್ಲಿ ಏನನ್ನು ಕಲಿಯುತ್ತೇವೆಯೋ ಅದು  ಜೀವನದ ಪ್ರಮುಖ ಘಟ್ಟಕ್ಕೆ ತಲುಪಿಸಲಿದೆ. ನಿಮಗೆ ಸಿಗುವ ಶಿಕ್ಷಣವನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.

ಇದೇ ಸಂದರ್ಭ ವಿದ್ಯಾರ್ಥಿಗಳು ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ರಂಗಾಯಣದ ನಿರ್ದೇಶಕಿ ಭಾಗೀರಥಿ ಬಾಯಿ ಕದಂ, ಕಾಲೇಜಿನ ಶೈಕ್ಷಣಿಕ ಸಂಯೋಜಕ ಪ್ರೊ.ಕೆ.ಸತ್ಯನಾರಾಯಣ, ಪ್ರಾಂಶುಪಾಲರಾದ ಡಾ.ಎಂ.ಶಾರದ,ಸಂದ್ಯಾರಾಣಿ ಸೇರಿದಂತೆ ಶಿಕ್ಷಕ ವೃಂದ,ವಿದ್ಯಾರ್ಥಿ ವೃಂದ ಹಾಜರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: