ಸುದ್ದಿ ಸಂಕ್ಷಿಪ್ತ

ಜು.26ರಂದು ಇಂಡಿಗನತ್ತ ಗ್ರಾಮದಲ್ಲಿ ಅಂಚೆ ಸಂತೆ

ಚಾಮರಾಜನಗರ, ಜು. 25 :– ಅಂಚೆ ಇಲಾಖೆಯು ಕೊಳ್ಳೇಗಾಲ ತಾಲೂಕಿನ ಮಲೆಮಹದೇಶ್ವರ ಬೆಟ್ಟ ಇಂಡಿಗನತ್ತ ಗ್ರಾಮದಲ್ಲಿ ಜುಲೈ 26ರಂದು ಅಂಚೆ ಸಂತೆ ಹಮ್ಮಿಕೊಂಡಿದೆ.

ಈ ಅಂಚೆ ಸಂತೆಯಲ್ಲಿ ಅಂಚೆ ಕಚೇರಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ ಖಾತೆ, ಪ್ರಧಾನಮಂತ್ರಿ ಜೀವನಜ್ಯೋತಿ ವಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಸುರಕ್ಷಾ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವ ವಿಮೆ, ಇತರೆ ಅಂಚೆ ಜೀವವಿಮೆ ಇನ್ನಿತರ ಅಂಚೆ ಯೋಜನೆಗಳನ್ನು ಸ್ವೀಕರಿಸಲಾಗುತ್ತದೆ. ಸುತ್ತಮುತ್ತಲ ಗ್ರಾಮಸ್ಥರು ಅಂಚೆಸಂತೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಅಂಚೆ ಅಧೀಕ್ಷಕ ಜಿ.ಸಿ. ಶ್ರೀನಿವಾಸ್ ತಿಳಿಸಿದ್ದಾರೆ. (ಆರ್.ವಿ.ಎಸ್,ಎಸ್.ಎಚ್)

Leave a Reply

comments

Related Articles

error: