ಮೈಸೂರು

ರಾಷ್ಟ್ರಪತಿಯಾಗಿ ಕೋವಿಂದ್ ಪದಗ್ರಹಣ: ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ

ಮೈಸೂರು,ಜು.25-ದೇಶದ 14 ನೇ ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಪದಗ್ರಹಣ ಹಿನ್ನೆಲೆಯಲ್ಲಿ ನಗರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸುರೇಶ್ ಕುಮಾರ್, ಇದೊಂದು ಸಂಭ್ರಮದ ದಿನ. ರಾಮನಾಥನ್ ಕೋವಿಂದ್ ಅವರಿಗೆ ರಾಷ್ಟ್ರಪತಿ ಭವನಕ್ಕೆ ಪ್ರವೇಶಕ್ಕೆ ಅವಕಾಶ ಕೊಟ್ಟಿರಲಿಲ್ಲ. ಅಂತಹ ವ್ಯಕ್ತಿ ಇಂದು ರಾಷ್ಟ್ರಪತಿಯಾಗಿದ್ದಾರೆ. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ದುಡಿದ ಕೋವಿಂದ್ ಅವರಿಗೆ ದೇಶದ ಅತ್ಯುನ್ನತ ಹುದ್ದೆ ದೊರಕಿರುವುದು ಹೆಮ್ಮೆಯ ವಿಚಾರ ಎಂದರು. (ವರದಿ-ಆರ್.ವಿ, ಎಂ.ಎನ್)

Leave a Reply

comments

Related Articles

error: