ಮೈಸೂರು

ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಲ್ಲಿ ಅವ್ಯವಸ್ಥೆ: ಎನ್ ಎಸ್ ಯುಐ ಪ್ರತಿಭಟನೆ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಲ್ಲಿ ನಡೆದಿರುವ ಅವ್ಯವಹಾರವನ್ನು ಖಂಡಿಸಿ ನ್ಯಾಶನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ವತಿಯಿಂದ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ವಿರುದ್ಧ ಘೋಷಣೆ ಕೂಗಿದರು.  ತಾಂತ್ರಿಕ ಲೋಪದಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುವಂತಾಗಿದೆ. ಪ್ರತಿವರ್ಷವೂ 4ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ ವಿವಿಯ ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಪರೀಕ್ಷೆಯಲ್ಲಿ ಅನುತ್ತೀರ್ಣಗೊಳಿಸಿ ಅವರಿಂದ ಮರುಮೌಲ್ಯಮಾಪನ ಶುಲ್ಕ, ಪರೀಕ್ಷಾ ಶುಲ್ಕ ಎಂಬ ಹೆಸರಿನಲ್ಲಿ ಹಗಲು ದರೋಡೆಗಿಳಿದಿದೆ ಎಂದು ಆರೋಪಿಸಿದರು.

ರಾಜ್ಯಪಾಲರು ಈ ಕೂಡಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆಗೊಳಪಡಿಸಬೇಕು. ಕಾರಣರಾದ ಅಧಿಕಾರಿಗಳನ್ನು, ವಿವಿಯ ಮುಖ್ಯಸ್ಥರನ್ನು ಅಮಾನತುಗೊಳಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಶಿಕ್ಷಣದಲ್ಲಿ ಫೈನಲ್ ವರೆಗೂ ಕ್ಯಾರಿಓವರ್ ಪದ್ಧತಿಯನ್ನು ಅಳವಡಿಸಿ, ಕಟ್ಟುನಿಟ್ಟಿನ ಮೌಲ್ಯಮಾಪನ ವ್ಯವಸ್ಥೆ ಜಾರಿಗೊಳಿಸಬೇಕು. ಶಿಕ್ಷಣದಲ್ಲಿ ವ್ಯಾಪಾರೀಕರಣ ಮತ್ತು ಕೋಮುವಾದವನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ನೂರಾರು ತಾಂತ್ರಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Leave a Reply

comments

Related Articles

error: