ಪ್ರಮುಖ ಸುದ್ದಿ

ಕ್ರೀಡೆ ದೈಹಿಕ, ಮಾನಸಿಕವಾಗಿ ಸದೃಢವಾಗಿರಲು ಸಹಕಾರಿ: ಶ್ರೀನಿವಾಸ್

ಪ್ರಮುಖ ಸುದ್ದಿ, ಹನೂರು, ಜು.೨೫: ಕ್ರೀಡೆ ದೈಹಿಕ ಹಾಗೂ ಮಾನಸಿಕವಾಗಿ ಸದೃಢವಾಗಿರಲು ಸಹಕಾರಿಯಾಗಿದ್ದು ಹೆಚ್ಚೆಚ್ಚು ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಎಂದು ಹಿರಿಯ ಪ್ರಾಥಮಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ಶ್ರೀನಿವಾಸ್ ಅಭಿಪ್ರಾಯಪಟ್ಟರು.
ಹನೂರು ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ೨೦೧೭-೧೮ನೇ ಸಾಲಿನ ೧೪ ವರ್ಷದೊಳಗಿನ ಹಿರಿಯ ಪ್ರಾಥಮಿಕ ಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋಲು ಗೆಲುವು ಸಹಜ. ಹಾಗಾಗಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮೂಲಕ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಶಾಲೆಗೆ ಉತ್ತಮ ಹೆಸರನ್ನು ತರುವ ಮೂಲಕ ರಾಜ್ಯ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗುವ ನಿಟ್ಟಿನಲ್ಲಿ ಗಮನಹರಿಸಬೇಕು. ಕ್ರೀಡಾ ಕೂಟದಲ್ಲಿ ತೀರ್ಪುಗಾರರಾಗಿರುವ ದೈಹಿಕ ಶಿಕ್ಷಕರು ಯಾವುದೇ ರೀತಿಯ ತಾರತಮ್ಯ ಮಾಡದೆ ತಮ್ಮ ಶಾಲೆಯ ಮಕ್ಕಳಂತೆ ಕಾಣಬೇಕೆಂದು ಕಿವಿ ಮಾತು ಹೇಳಿದರು.
ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕ ತೇಜ್‌ಪಾಲ್, ಮುಖ್ಯೋಪಾಧ್ಯಾಯ ಶಿವಲಿಂಗನಾಯಕ, ಪೊಲೀಸ್ ಅಧಿಕಾರಿ ರಾಜಶೇಖರ್ ಅರಸು ಹಾಗೂ ವಿವಿಧ ಶಾಲೆಯ ಮಕ್ಕಳು ಶಿಕ್ಷಕರು ಹಾಜರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: