ಮೈಸೂರು

ಯುವ ರೆಡ್ ಕ್ರಾಸ್ ಘಟಕ ಉದ್ಘಾಟನೆ

ಕುವೆಂಪುನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನೆ ಮತ್ತು ಉಪನ್ಯಾಸ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಮೈಸೂರು ವಿಭಾಗದ ಸಭಾಪತಿ ಡಾ.ಗುರುಮೂರ್ತಿ ಉದ್ಘಾಟಿಸಿ, ಯುವ ಜನತೆಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಬಳಿಕ ಮಾತನಾಡಿದ ಅವರು ಜನರಲ್ಲಿ ಜಾಗೃತಿ ಮೂಡಿಸಿ ಮಾನವೀಯ ಮೌಲ್ಯಗಳುಳ್ಳ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಉತ್ತೇಜನ ನೀಡಿದರು. ರೆಡ್ ಕ್ರಾಸ್ ಇತಿಹಾಸವುಳ್ಳ ಸಂಸ್ಥೆ. ಸಂಸ್ಥೆಯು ಅಸಹಾಯಕರನ್ನು ಮೇಲಕ್ಕೆತ್ತುವ ಕೆಲಸ ಮಾಡುತ್ತಿದೆ. ಮನುಷ್ಯನ ಜೀವನ ಮತ್ತು ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಯುವಕರಲ್ಲಿ ಆಸಕ್ತಿ ಹುಟ್ಟಿಸುವ ಮೂಲಕ ಗೌರವಯುತವಾಗಿ ಕಾರ್ಯ ನಿರ್ವಹಿಸಲು ಪ್ರೇರೇಪಿಸುತ್ತದೆ ಎಂದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯಕಾರಿ ಸಮಿತಿ ಸದಸ್ಯೆ ಡಾ.ಲಕ್ಷ್ಮಿ ರೆಡ್ ಕ್ರಾಸ್ ಕುರಿತು ಮಾಹಿತಿ ನೀಡಿದರು. ರೆಡ್ ಕ್ರಾಸ್ ಸಂಸ್ಥೆ ಕಾಳಜಿಯುತ ಪರಿಸರ ನಿರ್ಮಾಣ ಮಾಡುತ್ತದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರನ್ನು ಆಕರ್ಷಿಸಿ ಸಂಸ್ಥೆಗೆ ಬರಮಾಡಿಕೊಂಡು ಹೆಚ್ಚಿನ ಕಾರ್ಯ ನಿರ್ವಹಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಉಪಸಭಾಪತಿ ಪ್ರೊ.ಮಹದೇವಪ್ಪ, ಸಹಕಾರ್ಯದರ್ಶಿ ವನಜ, ಸಂಚಾಲಕಿ ಡಾ.ಹೆಚ್.ಪಿ.ಗೀತಾ ಉಪಸ್ಥಿತರಿದ್ದರು. ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಸೌಭಾಗ್ಯ ಎಂ.ಆರ್ ಅಧ್ಯಕ್ಷತೆವಹಿಸಿದ್ದರು.

Leave a Reply

comments

Related Articles

error: