ಮೈಸೂರು

ಗಿಡನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ

ಮೈಸೂರು, ಜು.೨೬: ಪ್ರಜ್ನಾವಂತ ನಾಗರಿಕ ವೇದಿಕೆಯ ವತಿಯಿಂದ ಚಾಮುಂಡಿ ಪುರಂ ವೃತ್ತದ ಬಳಿಯಿರುವ ತಗಡೂರು ರಾಮಚಂದ್ರ ಉದ್ಯಾನವನದಲ್ಲಿ ಕಾರ್ಗಿಲ್ ಯುದ್ದದಲ್ಲಿ ಮಡಿದ ಹಾಗು ವಿಜಯೋತ್ಸವಕ್ಕೆ ಕಾರಣರಾದ ಯೋಧರ ನೆನಪಾರ್ಥವಾಗಿ ೪೦ಕ್ಕೂ ಹೆಚ್ಚು ವಿವಿಧ ಜಾತಿಯ ಗಿಡ ನೆಡುವುದರ ಮೂಲಕ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಯಿತು.
ನಂತರ ಮಾತನಾಡಿದ ನಗರಪಾಲಿಕೆ ಸದಸ್ಯ ಮಾ.ವಿ.ರಾಮಪ್ರಸಾದ್, ಕಾರ್ಗಿಲ್ ಸಂಘರ್ಷವೆಂದೇ ಹೆಸರಾದ ಕಾರ್ಗಿಲ್ ಯುದ್ದ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ನಡೆದ ಸಶಸ್ತ್ರ ಸಂಘರ್ಷವಾಗಿದ್ದು, ಕಾಶ್ಮೀರದ ಕಾರ್ಗಿಲ್ ಜಿಲ್ಲೆ ಮತ್ತು ನಿಯಂತ್ರಣ ರೇಖೆಯಿರುವ ಪ್ರದೇಶಗಳಲ್ಲಿ ೧೯೯೯ರ ಮೇ ಮತ್ತು ಜುಲೈ ನಡುವೆ ಸಂಭವಿಸಿತು. ಉಭಯ ರಾಷ್ಟ್ರಗಳ ನಡುವಿನ ಗಡಿಯಾಗಿರುವ ನಿಯಂತ್ರಣ ರೇಖೆಯಲ್ಲಿರುವ ಭಾರತದ ನೆಲೆಗಳಿಗೆ ಪಾಕಿಸ್ತಾನದ ಸೈನಿಕರು ಮತ್ತು ಕಾಶ್ಮೀರಿ ಉಗ್ರಗಾಮಿಗಳು ನುಸುಳಿz ಯುದ್ಧಕ್ಕೆ ಕಾರಣ. ೮ ಯುದ್ಧದ ಆರಂಭದ ಹಂತಗಳಲ್ಲಿ, ಕಾರ್ಗಿಲ್ ಕದನಕ್ಕೆ ಸ್ವತಂತ್ರ ಕಾಶ್ಮೀರಿ ಉಗ್ರಗಾಮಿಗಳ ಮೇಲೆ ಪಾಕಿಸ್ತಾನ ಗೂಬೆ ಕೂರಿಸಿತು. ಆದರೆ ಯುದ್ಧಾ ನಂತರದ ಸಾವು ನೋವುಗಳ ದಾಖಲೆಗಳು ಮತ್ತು ಆ ಬಳಿಕ ಪಾಕಿಸ್ತಾನದ ಪ್ರಧಾನ ಮಂತ್ರಿ ಮತ್ತು ಸೇನಾ ಸಿಬ್ಬಂದಿ ಮುಖ್ಯಸ್ಥರು ನೀಡಿದ ಹೇಳಿಕೆಗಳು, ಜನರಲ್ ಅಶ್ರಫ್ ರಷೀದ್ ನೇತೃತ್ವದ ಪಾಕಿಸ್ತಾನಿ ಅರೆಸೇನೆ ಪಡೆಗಳು ಈ ಯುದ್ಧದಲ್ಲಿ ಪಾಲ್ಗೊಂಡಿದ್ದನ್ನು ರುಜುವಾತು ಮಾಡಿತು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಹೆಚ್.ಜಿ.ಗಿರಿಧರ್, ಬ್ರಾಹ್ಮಣ ಯುವ ಮುಖಂಡ ವಿಕ್ರಮ್ ಅಯ್ಯಂಗಾರ್, ಯುವಭಾರತ್ ಸಂಚಾಲಕ ಜೋಗಿ ಮಂಜು, ಆನಂದ್, ಜಯಸಿಂಹ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: