Uncategorizedಪ್ರಮುಖ ಸುದ್ದಿ

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಪ್ರಮುಖ ಸುದ್ದಿ, ಪಾಟ್ನಾ, ಜು.೨೬: ಬಿಹಾರದಲ್ಲಿ ಏರ್ಪಟ್ಟಿದ್ದ ಮಹಾಮೈತ್ರಿ ಮುರಿದುಬಿದ್ದಿದ್ದು ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ.
ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದ ಉಪಮುಖ್ಯಮಂತ್ರಿ ತೇಜಸ್ವಿಯಾದವ್ ರಾಜೀನಾಮೆ ನೀಡುವುದಿಲ್ಲ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸ್ಪಷ್ಟನೆ ನೀಡಿದ ಬಳಿಕ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರಿಗೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ನಿತೀಶ್ ಕುಮಾರ್ ಎನ್‌ಡಿಎ ಮೈತ್ರಿಕೂಟ ಸೇರಲು ಒಲವು ಹೊಂದಿದ್ದಾರೆ ಎಂದೂ ಹೇಳಲಾಗುತ್ತಿದ್ದು, ಇದೀಗ ನಿತೀಶ್ ಕುಮಾರ್ ರಾಜೀನಾಮೆಯಿಂದ ಮುಂದಿನ ರಾಜಕೀಯ ಬೆಳವಣಿಗೆ ಕುತೂಹಲ ಮೂಡಿಸಿದೆ.
ಈ ವೇಳೆ ಮಾತನಾಡಿದ ಅವರು, ಕಳೆದ ೨೦ ತಿಂಗಳಿನಿಂದ ಬಿಹಾರದಲ್ಲಿ ಮಹಾಮೈತ್ರಿಯ ಸರ್ಕಾರವಿತ್ತು. ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಾಧ್ಯವಾದಷ್ಟೂ ಉತ್ತಮ ಕೆಲಸಗಳನ್ನು ಮಾಡಿzನೆ. ಆದರೆ ಇತ್ತೀಚಿನ ದಿನಗಳಲ್ಲಿ ನಡೆದ ಕೆಲವು ಘಟನಾವಳಿಗಳಿಂದ ಮಹಾಮೈತ್ರಿ ಮುಂದುವರೆಸುವ ಸಾಧ್ಯತೆಗಳು ಇರಲಿಲ್ಲ. ನಾನು ಯಾರ ರಾಜೀನಾಮೆಯನ್ನೂ ಕೇಳಿರಲಿಲ್ಲ. ಡಿಸಿಎಂ ತೇಜಸ್ವಿ ಯಾದವ್, ರಾಹುಲ್ ಗಾಂಧಿ, ಲಾಲು ಪ್ರಸಾದ್ ಯಾದವ್ ಅವರೊಂದಿಗೆ ಮಾತನಾಡಿzನೆ. ಈ ಪರಿಸ್ಥಿತಿಯಲ್ಲಿ ಜನರಿಗೆ ಉತ್ತರಿಸಲು ಸಾಧ್ಯವಿರಲಿಲ್ಲ, ಅಂತರಾತ್ಮದ ಮಾತು ಕೇಳಿ ರಾಜೀನಾಮೆ ನೀಡಿzನೆ, ಮೈತ್ರಿಕೂಟದ ನಿಯಮ ಉಲ್ಲಂಘಿಸಿಲ್ಲ ಎಂದು ನಿತೀಶ್ ಹೇಳಿದ್ದಾರೆ. (ವರದಿ ಬಿ.ಎಂ)

Leave a Reply

comments

Related Articles

error: