ಮೈಸೂರು

ಸಾ.ರಾ.ನೇತೃತ್ವದ ಅನಿರ್ದಿಷ್ಟಾವಧಿ ಧರಣಿಗೆ ನಟ ಸಾಧು ಬೆಂಬಲ

ಮೈಸೂರು,ಜು.27-ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಶಾಸಕ ಸಾ.ರಾ.ಮಹೇಶ್ ಅವರ ನೇತೃತ್ವದಲ್ಲಿ ನಗರದ ಕಾಡಾ ಕಚೇರಿ ಮುಂದೆ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ನಟ ಸಾಧುಕೋಕಿಲ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕಳೆದ 3  ದಿನಗಳಿಂದ ಶಾಸಕರು ಹಾಗೂ ರೈತರು ಅನಿರ್ದಿಷ್ಟಾವಧಿ ಧರಣಿ ಕುಳಿತಿದ್ದಾರೆ. ಪ್ರತಿಭಟನೆಯ ಮೂರನೇ ದಿನ ರಾತ್ರಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ನಟ ಸಾಧು ಕೋಕಿಲ ಪ್ರತಿಭಟನೆಯಲ್ಲಿ ಭಾಗಿಯಾಗಿ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು. ಇವರೊಂದಿಗೆ ಶಾಸಕ ಜಿ.ಟಿ.ದೇವೇಗೌಡ, ಮಹಾಪೌರ ಎಂ.ಜೆ.ರವಿಕುಮಾರ್, ಮಾಜಿ ಮೇಯರ್ ಸಂದೇಶ್ ನಾಗರಾಜ್ ಇತರರು ಸಾಥ್ ನೀಡಿದರು. (ವರದಿ-ಎಸ್.ಎನ್, ಎಂ.ಎನ್)

 

Leave a Reply

comments

Related Articles

error: