ಸುದ್ದಿ ಸಂಕ್ಷಿಪ್ತ

ಸರಳ ಮದುವೆ ಮಾಡಿಕೊಂಡ ಪ.ಪಂ. ದಂಪತಿಗಳಿಗೆ ಪ್ರೋತ್ಸಾಹಧನ

ಚಾಮರಾಜನಗರ, ಜು. 27:- ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಸರಳವಾಗಿ ಮದುವೆ ಮಾಡಿಕೊಂಡಿರುವ ಪರಿಶಿಷ್ಟ ಪಂಗಡ ದಂಪತಿಗಳಿಗೆ ಸರಳ ವಿವಾಹ ಯೋಜನೆಯಡಿ 50 ಸಾವಿರ ರೂ. ಪ್ರೋತ್ಸಾಹ ಧನ ನೀಡಲಿದ್ದು ಅರ್ಜಿ ಆಹ್ವಾನಿಸಿದೆ.

2015-16ನೇ ಸಾಲಿನಿಂದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸರಳವಾಗಿ ವಿವಾಹವಾಗಿರುವ ಪರಿಶಿಷ್ಟ ವರ್ಗ ಪಂಗಡ ದಂಪತಿ ಪ್ರೋತ್ಸಾಹಧನ ಪಡೆಯಬಹುದು. ಅರ್ಜಿ ಹಾಗೂ ವಿವರಗಳಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ (ದೂ.ಸಂ.08226-226070), ತಾಲೂಕು ಸಮಾಜ / ಪರಿಶಿಷ್ಟ ಕಲ್ಯಾಣಾಧಿಕಾರಿ, ಚಾಮರಾಜನಗರ ದೂ.ಸಂ. 08226-223143, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ, ಕೊಳ್ಳೇಗಾಲ ದೂ.ಸಂ. 08224-253196, ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಯಳಂದೂರು ದೂ.ಸಂ. 08226-240309, ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಗುಂಡ್ಲುಪೇಟೆ ದೂ.ಸಂ. 08229-222984 ಸಂಪರ್ಕಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ. (ಆರ್.ವಿ.ಎಸ್,ಎಸ್.ಎಚ್)

Leave a Reply

comments

Related Articles

error: