ಪ್ರಮುಖ ಸುದ್ದಿಮೈಸೂರು

ಮೈಸೂರು ವಿವಿ ಕುಲಸಚಿವ ಬಸವರಾಜು ಅಮಾನತು

ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಯುವರಾಜ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರನ್ನು ನೇಮಕ ಮಾಡಿರುವ ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವ ಡಾ.ಸಿ.ಬಸವರಾಜು ಅವರನ್ನು ಮಂಗಳವಾರ ಸೇವೆಯಿಂದ ವಜಾಗೊಳಿಸಿ ಅಮಾನತು ಮಾಡಲಾಗಿದೆ.

ಸರ್ಕಾರ ಸೆಪ್ಟೆಂಬರ್ 24 ಮತ್ತು ಅಕ್ಟೋಬರ್ 14ರಂದು ಗುತ್ತಿಗೆ ಆಧಾರದ ಮೇಲೆ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಿಕೊಂಡಿರುವ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಿತ್ತು. ಆದರೆ ಸರ್ಕಾರದ ಸೂಚನೆಗಳನ್ನು ಪಾಲಿಸದೇ ನೇಮಕಾತಿ ಪ್ರಕ್ರಿಯೆ ಕೈಗೊಂಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಹೇಳಲಾಗಿದೆ. ಅದರಿಂದ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಎನ್.ವೀರಬ್ರಹ್ಮಚಾರಿ ಮಂಗಳವಾರ ಡಾ.ಸಿ.ಬಸವರಾಜು ಅವರನ್ನು ತಕ್ಷಣ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ 200ರ ಪ್ರಕರಣ 17ರನ್ವಯ ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿರುವ ಕಾರಣ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಪಡಿಸಲಾಗಿದ್ದು, ಅಪರ ಜಿಲ್ಲಾಧಿಕಾರಿ ವೆಂಕಟೇಶ್ ಅವರನ್ನು ಈ ಹುದ್ದೆಗೆ ಹೆಚ್ಚುವರಿಯಾಗಿ ನೇಮಿಸಲಾಗಿದೆ.

Leave a Reply

comments

Related Articles

error: