ಮೈಸೂರು

ಕಾರ್ಮಿಕ ಸಂಘಗಳು ಕಾರ್ಮಿಕರ ಹಿತ ಕಾಯಬೇಕು: ರವಿ

ಮೈಸೂರು, ಜು.೨೭: ಮಾನವ ಹಕ್ಕುಗಳ ಹಿತರಕ್ಷಣಾ ಸಮಿತಿ, ಕಾರ್ಮಿಕ ಇಲಾಖೆ ಇಎಸ್‌ಐ ಮತ್ತು ಪಿಎಫ್ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ರೋಟರಿ ಸಭಾಂಗಣದಲ್ಲಿ ಕಾರ್ಮಿಕರ ಹಕ್ಕುಗಳ ಕಾರ್ಯಾಗಾರವನ್ನು ಗುರುವಾರ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಜಿಲ್ಲಾ ನ್ಯಾಯಾಧೀಶರು ಹಾಗೂ ಕಾರ್ಮಿಕ ನ್ಯಾಯಾಲಯ ಇಲಾಖೆಯ ಅಧ್ಯಕ್ಷಾಧಿಕಾರಿ ಎನ್.ಎಂ.ರವಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕಾರ್ಮಿಕರು ದೇಶದ ಆರ್ಥಿಕತೆಯ ಬೆನ್ನೆಲುಬಾಗಿದ್ದು ಅವರ ಹಕ್ಕುಗಳ ರಕ್ಷಣೆ ಮಾಡಬೇಕಾದದ್ದು ಪ್ರತಿಯೊಬ್ಬರ ಜವಾಬ್ದಾರಿ. ಕಾರ್ಮಿಕ ಸಂಘಗಳು ಕಾರ್ಮಿಕರ ಹಿತಕಾಯುವ ಸಲುವಾಗಿ ರಚನೆಯಾಗಿದ್ದು, ಕೇವಲ ಕಾರ್ಖಾನೆ ಮಾಲೀಕರ ವಿರುದ್ಧ ಘೋಷಣೆ ಕೂಗಲು ಸೀಮಿತವಾಗಬಾರದು. ಕಾರ್ಮಿಕರ ಹಕ್ಕುಗಳ ಉಲ್ಲಂಘನೆಯಾದಾಗ, ತೊಂದರೆಯಾದಾಗ ಸಂಘಗಳು ಮುಂದೆ ನಿಂತು ಸಮಸ್ಯೆ ಬಗೆಹರಿಸಬೇಕು. ಕಾರ್ಮಿಕರಿಗೆ ಇರುವ ಹಕ್ಕುಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಹಾಯಕ ಕಾರ್ಮಿಕ ಆಯುಕ್ತ ಎ.ಸಿ.ತಮ್ಮಣ್ಣ, ಕಾರ್ಮಿಕ ಭವಿಷ್ಯ ನಿಧಿ ಸಹಾಯಕ ಆಯುಕ್ತ ಸಚಿನ್ ಸೌರಭ್, ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಪರಿವರ್ತನಾಧಿಕಾರಿ ಹೆಚ್.ಕೆ.ಆನಂದ, ಎಸ್‌ಜೆಕೆ ಡೆವಲಪರ್‍ಸ್ ಮಾಲೀಕ ಕೆ.ದೊರೆಸ್ವಾಮಿ, ಮಾನವ ಹಕ್ಕುಗಳ ಹಿತರಕ್ಷಣಾ ಸಮಿತಿಯ ಮಹಿಳಾ ರಾಜ್ಯಾಧ್ಯಕ್ಷೆ ಬಿ.ಎಸ್.ಗೀತಾಗಣೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: