ಮೈಸೂರು

ರಾಜ್ಯದ ಮಹಿಳಾ ಕೈಗಾರಿಕಾ ನೀತಿ ಇಡೀ ದೇಶಕ್ಕೇ ಮಾದರಿ: ರತ್ನಪ್ರಭಾ

ಮೈಸೂರು, ಜು.೨೭: ಕರ್ನಾಟಕ ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ವಿಶೇಷ ಅವಕಾಶ ನೀಡಿದ್ದು ರಾಜ್ಯದಲ್ಲಿರುವ ಮಹಿಳಾ ಕೈಗಾರಿಕಾ ನೀತಿ ಇಡೀ ದೇಶಕ್ಕೇ ಮಾದರಿ ಎಂದು ಅಪರ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅಭಿಪ್ರಾಯಪಟ್ಟರು.
ಮಹಿಳಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದಲ್ಲಿ ಗುರುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಮಹಿಳೆಯರಿಗೆ ಉದ್ಯಮ ಪ್ರೇರಣಾ ತರಬೇತಿ ಶಿಬಿರ ಹಾಗೂ ವೈಬ್ ಸಂಸ್ಥೆಯ ಉದ್ಘಾಟನೆಯನ್ನು ನೆರವೇರಿಸಿ ಬಳಿಕ ಮಾತನಾಡಿದ ಅವರು, ಮಹಿಳೆಯರು ಸ್ವಾಬಲಂಬಿಗಳಾಗಬೇಕೆಂಬ ಉzಶದಿಂದ ರಾಜ್ಯ ಸರ್ಕಾರ ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ವಿಶೇಷ ಅವಕಾಶ ಕಲ್ಪಿಸಿದ್ದು, ರಾಜ್ಯದ ಮಹಿಳಾ ಕೈಗಾರಿಕಾ ನೀತಿ ಇಡೀ ದೇಶಕ್ಕೇ ಮಾದರಿಯಾಗಿದೆಯಲ್ಲದೆ ಹೊರದೇಶಗಳಿಂದಲೂ ನಮ್ಮ ನೀತಿಯ ಬಗ್ಗೆ ತಿಳಿದುಕೊಳ್ಳಲು ಬರುತ್ತಾರೆ. ಮಹಿಳೆಯರಿಗೆ ಮತ್ತಷ್ಟು ಪ್ರೋತ್ಸಾಹ ನೀಡುವ ಉzಶದಿಂದ ಮಹಿಳೆಯರಿಗಾಗಿಯೆ ರಾಜ್ಯದ ೬ ಕಡೆ ಪ್ರತ್ಯೇಕ ಕೈಗಾರಿಕಾ ಪ್ರದೇಶ ನಿರ್ಮಿಸಲು ಚಿಂತಿಸಲಾಗಿದೆ. ಇಂದು ವೈಬ್ ಸಂಸ್ಥೆ ಬೀಜವಾಗಿ ಮೊಳಕೆಯೊಡೆದಿದ್ದು, ಹೆಮ್ಮರವಾಗಿ ಬೆಳೆದು ದೇಶದ ಆರ್ಥಿಕತೆಗೆ ಮತ್ತಷ್ಟು ಕೊಡುಗೆ ನೀಡುವಂತಾಗಲಿ ಎಂದು ಆಶಿಸಿದರು.
ಇದೇ ವೇಳೆ ಉದ್ಯಮ ಸಾಧಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಎಫ್‌ಕೆಸಿಸಿಐ ಹಿರಿಯ ಉಪಾಧ್ಯಕ್ಷ ಸುಧಾಕರ್ ಎಸ್.ಶೆಟ್ಟಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಹೆಚ್.ರಾಮಕೃಷ್ಣೇಗೌಡ, ಎಂಸಿಸಿಐ ಅಧ್ಯಕ್ಷ ಎ.ಎಸ್.ಸತೀಶ್, ಕೆಎಸ್‌ಎಫ್‌ಸಿ ಉಪಪ್ರಧಾನ ವ್ಯವಸ್ಥಾಪಕ ಶ್ರೀನಿವಾಸಪ್ಪ, ಕೆಐಎಡಿಬಿ ಅಭಿವೃದ್ಧಿ ಅಧಿಕಾರಿ ಶಿವಕುಮಾರ್, ಕೆನರಾಬ್ಯಾಂಕ್ ಮುಖ್ಯಸ್ಥ ಮೋಹನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: