ಮೈಸೂರು

ಭ್ರಷ್ಟಾಚಾರ ಶಿಕ್ಷಣ ಕ್ಷೇತ್ರಕ್ಕೂ ವ್ಯಾಪಿಸಿದೆ: ದಯಾನಂದ ಮಾನೆ

ಮೈಸೂರು, ಜು.೨೭: ಇಂದು ಭ್ರಷ್ಟಾಚಾರ ಕೇವಲ ರಾಜಕೀಯ ಕ್ಷೇತ್ರಕ್ಕೆ ಸೀಮಿತವಾಗಿರದೆ ಶಿಕ್ಷಣ ಕ್ಷೇತ್ರಕ್ಕೂ ವ್ಯಾಪಿಸಿರುವುದರಿಂದ ದೇಶದ ಅಭಿವೃದ್ಧಿ ಕುಂಟಿತವಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ.ದಯಾನಂದ ಮಾನೆ ಬೇಸರ ವ್ಯಕ್ತಪಡಿಸಿದರು.
ಗುರುವಾರ ವಿಶ್ವವಿದ್ಯಾಲಯದ ಕ್ರಾರ್ಫರ್ಡ್ ಹಾಲ್‌ನಲ್ಲಿ ಆಯೋಜಿಸಿದ್ದ ಮೈಸೂರು ವಿಶ್ವವಿದ್ಯಾಲಯದ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭ್ರಷ್ಟಾಚಾರ ದೇಶದ ಸಾಮಾಜಿಕ ಪಿಡುಗಾಗಿದ್ದು ಅಭಿವೃದ್ದಿಯನ್ನೇ ನುಂಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರವನ್ನೂ ಭ್ರಷ್ಟಾಚಾರ ಆವರಿಸುತ್ತಿರುವುದು ಬೇಸರದ ಸಂಗತಿ. ಮೈಸೂರು ವಿಶ್ವವಿದ್ಯಾಲಯ ಶತಮಾನ ಪೂರೈಸಿದ ದೇಶದ ೬ನೇ, ದಕ್ಷಿಣ ಭಾರತದ ೪ನೇ ಹಾಗೂ ರಾಜ್ಯದ ಮೊದಲ ವಿಶ್ವವಿದ್ಯಾಲಯವಾಗಿದ್ದು, ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದೆ. ದೇಶದ ಅಭಿವೃದ್ಧಿಯಾಗಬೇಕಾದರೆ ಶಿಕ್ಷಣ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಯಾಗಬೇಕು. ಜತೆಗೆ ವಿದ್ಯಾರ್ಥಿಗಳು ನೂತನ ಸಂಶೋಧನೆಗಳು, ಆವಿಷ್ಕಾರಗಳನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಬೆಂಗಳೂರಿನ ನ್ಯಾಷನಲ್ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ ಕುಲಪತಿ ಪ್ರೊ.ಆರ್.ವೆಂಕಟರಾವ್, ಮೈಸೂರು ವಿವಿ ಕುಲಸಚಿವೆ ಡಿ.ಭಾರತಿ, ಪರೀಕ್ಷಾಂಗ ಕುಲಸಚಿವ ಪ್ರೊ.ಸೋಮಶೇಖರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: