ಕರ್ನಾಟಕ

ಧರಂಸಿಂಗ್ ವಿಧಿವಶ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ

ಮೈಸೂರು,ಜು.27-ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಿಸಿದೆ.

ಧರ್ಮಸಿಂಗ್ ಅವರ ಗೌರವಾರ್ಥ ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳಿಗೆ ಇಂದು ಮಧ್ಯಾಹ್ನ ಅರ್ಧ ದಿನ ರಜೆ ಘೋಷಿಸಲಾಗಿದೆ. ಧರ್ಮಸಿಂಗ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಾಳೆ ಕಲಬುರಗಿ ಯಲ್ಲಿ ನಡೆಯಲಿರುವುದರಿಂದ ಬೀದರ್, ಕಲಬುರಗಿ ಜಿಲ್ಲೆಯಲ್ಲಿ ನಾಳೆ ಸರ್ಕಾರಿ ಕಚೇರಿಗಳು ಮತ್ತು ಶಾಲೆ, ಕಾಲೇಜುಗಳಿಗೆ ರಜೆ ಇರಲಿದೆ.
ಧರ್ಮಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಹಾವೇರಿಯ ಕಾಗಿನೆಲೆಯಲ್ಲಿ ಆಯೋಜಿಸಿದ್ದ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಮುಖ್ಯಮಂತ್ರಿಯವರು ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾರೆ. (ವರದಿ-ಎಸ್.ಎನ್, ಎಂ.ಎನ್)

Leave a Reply

comments

Related Articles

error: