ಮೈಸೂರು

ಜು.30. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಮೈಸೂರು,ಜು. 27 : ಅಂಬೇಡ್ಕರ್ ವಿವಿಧೋದ್ದೇಶ ಸೇವಾ ಸಂಸ್ಥೆ, ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘದ 5 ನೇ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ SSLC ಹಾಗೂ PUC ಯ 500 ಜನ SE- ST ಪ್ರತಿಭಾನ್ವಿತ  ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆ ಮತ್ತು ಸಂಸ್ಥೆಯು ಹೊರಡಿಸಿದ್ದ ಕರ ಪತ್ರದಂತೆ ಅಂಬೇಡ್ಕರ್ ಹಬ್ಬ ಆಚರಿಸಿದವರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಉರಿಲಿಂಗಿಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜುಲೈ 30 ರಂದು ನಗರದ ಕಲಾ ಮಂದಿರದಲ್ಲಿ ಆಯೋಜಿಸಲಾಗಿದ್ದು,ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ರವರು ಉದ್ಘಾಟಿಸಲಿದ್ದಾರೆ.ಈಗಾಗಲೇ 50o ಕ್ಕೂ ಹೆಚ್ಚು ಅರ್ಜಿಗಳು ಬಂದಿದೆ. ಸಾಮಾಜಿಕ, ಆರ್ಥಿಕ,ಶೈಕ್ಷಣಿಕ ಪ್ರಗತಿಗಾಗಿ,  ಪ್ರತಿಭಾನ್ವಿತರಿಗೆ ಮತ್ತಷ್ಟು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಡತನ ರೇಖೆಗಿಂತ ಕೆಳಗಿರುವ ವಿದ್ಯಾರ್ಥಿಗಳಿಗೆ ಒಂದು ಸಾವಿರ ನಗದು ಬಹುಮಾನ ಹಾಗೂ ಹಣ್ಣಿನ ಗಿಡ ನೀಡಲಾಗುವುದು ಎಂದು ತಿಳಿಸಿದರು.

ಸಹಕಾರ ಸಂಘಕ್ಕೆ ಸದಸ್ಯರಾಗ ಬಯಸುವವರು 0821-4270808 ಸಂಪರ್ಕಿಸಿ ತಮ್ಮ ಹೆಸರನ್ನು  ನೋಂದಾಯಿಸಿಕೊಳ್ಳಬಹುದು ಎಂದರು.

ಸುದ್ದಿಗೋಷ್ಠಿಯಲ್ಲಿ ಸಲಹೆಗಾರ ತುಂಬಲ ರಾಮಣ್ಣ, ವಿಷ್ಣುವರ್ಧನ್ ಸೇರಿದಂತೆ ಮತ್ತಿತರರು ಹಾಜರಿದ್ದರು. (ವರದಿ : ಕೆ.ಎಂ.ಆರ್)

Leave a Reply

comments

Related Articles

error: