ಮೈಸೂರು

ಸುಸ್ಥಿರ ಗ್ರಾಮೀಣ ಅಭಿವೃದ್ಧಿ ದೂರದೃಷ್ಟಿ ಕುರಿತು ಜುಲೈ 28 ರಂದು ರಾಷ್ಟ್ರೀಯ ವಿಚಾರ ಸಂಕಿರಣ

ಮೈಸೂರು, ಜುಲೈ 27 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ಅಧ್ಯಯನ ಹಾಗೂ ಸಂಶೋಧನಾ ವಿಭಾಗ ಹಾಗೂ ಇಂಡಿಯನ್ ಕೌನ್ಸಿಲ್ ಆಫ್ ಸೋಷಿಯಲ್ ಸೈನ್ಸ್ ರಿಸರ್ಚ್ ಇವರ ವತಿಯಿಂದ ಜುಲೈ 28 ರಂದು ಬೆಳಿಗ್ಗೆ 10.30 ಗಂಟೆಗೆ ಕಾವೇರಿ ಸಭಾಂಗಣದಲ್ಲಿ ಸರ್ಕಾರದ ಕಾರ್ಯಕ್ರಮಗಳ ಮೂಲಕ ಸುಸ್ಥಿರ ಗ್ರಾಮೀಣ ಅಭಿವೃದ್ಧಿ ದೂರದೃಷ್ಟಿ ಮತ್ತು ಕಾರ್ಯವಿಷಯದ ಬಗ್ಗೆ ಆಯೋಜಿಸಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ.

ಗದಗದ ಕರ್ನಾಟಕ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‍ರಾಜ್ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಬಿ. ತಿಮ್ಮೇಗೌಡ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ತಮಿಳುನಾಡು ಗಾಂಧಿ ಗ್ರಾಮ ಗ್ರಾಮೀಣ ಸಂಸ್ಥೆ ಪ್ರಾಧ್ಯಾಪಕರು ಹಾಗೂ ಡೀನ್ ಡಾ.ಸಿ. ಪಿಚ್ಚಯ್, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ .ಡಿ. ಶಿವಲಿಂಗಯ್ಯ ಅವರು ಭಾಗವಹಿಸುವರು. ಜುಲೈ 29 ರಂದು ಮಧ್ಯಾಹ್ನ 2-30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಧಾರವಾಡ ಕರ್ನಾಟಕ ವಿಶ್ವವಿದ್ಯಾನಿಲಯದ  ಅರ್ಥಶಾಸ್ತ್ರ ವಿಭಾಗದ ಪ್ರೊ.ಎಸ್.ಟಿ. ಬಾಗಲಕೋಟಿ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ.

-ಎನ್.ಬಿ.

Leave a Reply

comments

Related Articles

error: