ಕರ್ನಾಟಕಮೈಸೂರು

ಸಂಘ-ಸಂಸ್ಥೆಗಳು ಜನಾಂಗದ ಏಳ್ಗೆಗೆ ಶ್ರಮಿಸಬೇಕು : ಸೋಮನಾಯಕ ಕರೆ

ರಾಜಕಾರಣಕ್ಕೆ ಕೈ ಹಾಕದೇ ಸಂಘದ ಧೋರಣೆಗಳನ್ನು ಇಟ್ಟುಕೊಂಡು ಮುಂದುವರಿಯುವತ್ತ ಜನಾಂಗದ ಸಂಘ-ಸಂಸ್ಥೆಗಳು ಶ್ರಮಿಸಬೇಕು ಎಂದು ಜಿಲ್ಲಾ ನಾಯಕ ಸಂಘದ ಅಧ್ಯಕ್ಷ ಕೆಲ್ಲಂಬಳ್ಳಿ ಸೋಮನಾಯಕ ಕರೆ ನೀಡಿದರು.

ಯಳಂದೂರು ತಾಲೂಕಿನ ಅಗರ ಗ್ರಾಮದ ವಾಲ್ಮೀಕಿ ಸಮಾಜ ಸೇವಾ ಸಮಿತಿಯ 2ನೇ ವರ್ಷದ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸೋಮನಾಯಕ ಮಾತನಾಡಿದರು. ನಾಯಕ ಜನಾಂಗವು ಹಿಂದುಳಿದಿದ್ದು, ಜನಾಂಗವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣವನ್ನು ಕೊಡಿಸುವುದರ ಮೂಲಕ ಉನ್ನತ ಹುದ್ದೆಗಳನ್ನು ಪಡೆಯಬೇಕು. ಅಲ್ಲದೇ ಜನಾಂಗದ ಸಂಘ-ಸಂಸ್ಥೆಗಳು ಯಾವುದೇ ರಾಜಕೀಯ ಪಕ್ಷಕ್ಕೆ ಸೇರದೆ ತಮ್ಮದೇ ಆದ ತತ್ವ ಸಿದ್ದಾಂತಗಳ ಧೋರಣೆಗಳ ಮೂಲಕ ಕಾರ್ಯನಿರ್ವಹಿಸಿ ಜನಾಂಗದ ಏಳ್ಗೆಗೆ ಶ್ರಮಿಸಬೇಕು. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕು. ಜನಾಂಗವು ಸರ್ಕಾರದ ಸೌಲಭ್ಯಗಳನ್ನು ಪಡೆಯುವ ನಿಟ್ಟಿನಲ್ಲಿ ಮುಂದೆ ಬರಬೇಕು ಎಂದರು.

ಸುಪ್ರೀಂಕೋರ್ಟ್ ಆದೇಶದಂತೆ ಸರ್ಕಾರವು ಶೇಕಡಾ 7ರಷ್ಟು ಮೀಸಲಾತಿಯನ್ನು ನೀಡಬೇಕು. ಪರಿವಾರ, ತಳವಾರರನ್ನು ಎಸ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿದರು.

ಪಾಳ್ಯ ಕ್ಷೇತ್ರದ ಜಿಲ್ಲಾಪಂಚಾಯತ್ ಸದಸ್ಯೆ ಶಿವಮ್ಮ ಕೃಷ್ಣ ನಾಯಕ ಮಾತನಾಡಿ ಜನಾಂಗವು ಸಂಘಟಿತವಾಗುವ ಮೂಲಕ ಸರ್ಕಾರದ ಸವಲತ್ತುಗಳನ್ನು ಪಡೆಯುವಲ್ಲಿ ಸಕ್ರಿಯವಾಗಬೇಕು. ಮಹರ್ಷಿ ವಾಲ್ಮೀಕಿಯು ರಾಮಾಯಣದಂತಹ ಕಾವ್ಯವನ್ನು ರಚಿಸಿ ಇಡೀ ದೇಶಕ್ಕೆ ಆದರ್ಶಪ್ರಾಯರಾಗಿದ್ದಾರೆ. ರಾಮಾಯಣವನ್ನು ಓದುವ ಮೂಲಕ ಅದರಲ್ಲಿನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ತಿಳಿಸಿದರು.

ನಾಯಕ ಜನಾಂಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಾಲ್ಮೀಕಿ ಸಮಾಜ ಸೇವಾ ವತಿಯಿಂದ ನೆನಪಿನ ಕಾಣಿಕೆ ಮತ್ತು ಬಹುಮಾನಗಳನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ತಾಪಂ ಉಪಾಧ್ಯಕ್ಷೆ ಪದ್ಮಾವತಿ, ವಾಲ್ಮೀಕಿ ಸಮಾಜಸೇವಾ ಸಮಿತಿ ಜಿಲ್ಲಾ ಕಾರ್ಯದರ್ಶಿ ಅಗ್ರಹಾರ ರಂಗಸ್ವಾಮಿ, ತಾಪಂ ಸದಸ್ಯ ವೆಂಕಟೇಶ್, ಕೊಳ್ಳೇಗಾಲ ವಿಎಸ್ ಎಸ್ ಎಸ್ ಅಧ್ಯಕ್ಷ ಕಾಮರಾಜು ಮತ್ತಿತರರು ಉಪಸ್ಥಿತರಿದ್ದರು.

ತಾಲೂಕಿನ ಅಗರ ಗ್ರಾಮದಲ್ಲಿ ವಾಲ್ಮೀಕಿ ಸಮಾಜ ಸೇವಾ ಸಮಿತಿ ವತಿಯಿಂದ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿಯವರ ಭಾವಚಿತ್ರವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.

 

Leave a Reply

comments

Related Articles

error: