ಮೈಸೂರು

ಕುಕ್ಕರಹಳ್ಳಿ ಕೆರೆಗೆ ಜಿಲ್ಲಾಧಿಕಾರಿ ಡಿ.ರಂದೀಪ್ ಭೇಟಿ : ಪರಿಶೀಲನೆ

ಮೈಸೂರು,ಜು.28:- ಮೈಸೂರಿನ ಕುಕ್ಕರಹಳ್ಳಿ ಕೆರೆಗೆ ಜಿಲ್ಲಾಧಿಕಾರಿ ಡಿ.ರಂದೀಪ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕುಕ್ಕರಹಳ್ಳಿಕೆರೆಗೆ ಡ್ರೈನೇಜ್ ನೀರು ಬಿಡಲಾಗುತ್ತಿದ್ದು, ವಾಯುವಿಹಾರಿಗಳು ತೊಂದರೆ ಅನುಭವಿಸುತ್ತಿದ್ದರು. ಇದರಿಂದ ಕೆರೆಗೆ ಡ್ರೈನೇಜ್ ನೀರನ್ನು ಬಿಡುತ್ತಿದ್ದರಿಂದ ವಾಸನೆ ಬರುತ್ತಿದ್ದು, ದೂರುಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿ ಯಾವ ರೀತಿ ಅಭಿವೃದ್ಧಿ ನಡೆಸಬೇಕು. ಈ ಎಲ್ಲ ಸಮಸ್ಯೆಗಳಿಂದ ಹೊರಬರಲು ಯಾವ ಕ್ರಮ ಕೈಗೊಳ್ಳಬೇಕೆನ್ನುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಈ ಸಂದರ್ಭ ಪಾಲಿಕೆಯ ಆಯುಕ್ತ ಜಿ.ಜಗದೀಶ್, ನರ್ಮ್ ಯೋಜನಾಧಿಕಾರಿ ಸುರೇಶ್ ಬಾಬು ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: