ಮೈಸೂರು

ಅಬ್ದುಲ್ ಕಲಾಂ ಪುಣ್ಯ ಸ್ಮರಣಾರ್ಥ: ಸಸಿ ನೆಟ್ಟ ಕೆ.ಎಂ.ಪಿ.ಕೆ.ಚಾರಿಟಬಲ್ ಟ್ರಸ್ಟ್

ಮೈಸೂರು,ಜು.28-ಮಾಜಿ ರಾಷ್ಟ್ರಪತಿ ದಿವಂಗತ ಅಬ್ದುಲ್ ಕಲಾಂ ಅವರ 2ನೇ ವರ್ಷದ ಪುಣ್ಯ ಸ್ಮರಣಾರ್ಥ ಕೆ.ಎಂ.ಪಿ.ಕೆ.ಚಾರಿಟಬಲ್ ಟ್ರಸ್ಟ್ ವತಿಯಿಂದ ಸಸಿ ನೆಡಲಾಯಿತು.

ನಗರದ ಚಾಮುಂಡಿಪುರಂನಲ್ಲಿರುವ ಅರುಣೋದಯ ವಿಶೇಷ ಶಾಲೆ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಶೇಷ ಮಕ್ಕಳು ನಾನಾ ಜಾತಿಯ ಸಸಿಗಳನ್ನು ನೆಡಲಾಯಿತು.

ಅಬ್ದುಲ್ ಕಲಾಂ ರವರು ಈ ರಾಷ್ಟ್ರದ ಪ್ರಥಮ ಪ್ರಜೆಯಾಗಿ ದೇಶವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ದ  ಅಪ್ರತಿಮ ನಾಯಕ. ವಿಜ್ಞಾನಿಯಾಗಿ ವಿಜ್ಞಾನ ಕ್ಷೇತ್ರಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಮಕ್ಕಳ ಪ್ರಿಯರಾಗಿದ್ದ ಕಲಾಂ ಬರೆದ ಇನ್ ಸ್ಪರಿಂಗ್ ಥಾಟ್ಸ್ ಪುಸ್ತಕ ಇಂದಿನ ಯುವಪೀಳಿಗೆಗೆ ಮಾರ್ಗದರ್ಶನ ಎಂದು ಅವರನ್ನು ಸ್ಮರಿಸಿದರು.

ಈ ಸಂಧರ್ಭದಲ್ಲಿ ನಗರಪಾಲಿಕೆ ಸದಸ್ಯ ಮಾ.ವಿ.ರಾಮಪ್ರಸಾದ್, ಡಿ.ಟಿ.ಎಸ್.ಫೌಂಡೇಶನ್ ಅಧ್ಯಕ್ಷ ಡಿ.ಟಿ.ಪ್ರಕಾಶ್, ಮಾಜಿ ನಗರಪಾಲಿಕೆ ಸದಸ್ಯ ಪಾರ್ಥಸಾರಥಿ, ಕೆ.ಎಂ‌.ಪಿ.ಕೆ.ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ್ ಅಯ್ಯಂಗಾರ್, ಯುವಭಾರತ್ ಸಂಚಾಲಕ ಜೋಗಿಮಂಜು, ಶ್ರೀಕಾಂತ್ ಕಶ್ಯಪ್,  ಅಪೂರ್ವ ಸುರೇಶ್ ಹಾಗೂ ಶಾಲೆಯ ವಿಶೇಷ ಚೇತನ ಮಕ್ಕಳು ಹಾಜರಿದ್ದರು. (ವರದಿ-ಎಚ್.ಎನ್, ಎಂ.ಎನ್)

Leave a Reply

comments

Related Articles

error: