ಮೈಸೂರು

ಯೋಜನೆಗಳು ಗ್ರಾಮವನ್ನು ತಲುಪಿದಾಗ ಮಾತ್ರ ಸುಸ್ಥಿರ ಅಭಿವೃದ್ಧಿ ಸಾಧ್ಯ: ಮಣಿ

ಮೈಸೂರು, ಜು.೨೮: ೧೨೫ ಗ್ರಾಮಾಭಿವೃದ್ಧಿ ಯೋಜನೆಗಳು ಒಂದು ಗ್ರಾಮವನ್ನು ತಲುಪಿದಾಗ ಮಾತ್ರ ಸುಸ್ಥಿರ ಅಭಿವೃದ್ಧಿ ಸಾಧ್ಯ ಎಂದು ತಮಿಳುನಾಡಿನ ಗ್ರಾಮ ಗ್ರಾಮೀಣ ಸಂಸ್ಥೆಯ ಡೀನ್ ಪ್ರೊ.ಎನ್.ಡಿ.ಅಭಿಪ್ರಾಯಪಟ್ಟರು.
ಶುಕ್ರವಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಅರ್ಥಶಾಸ್ತ್ರ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ವತಿಯಿಂದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸರ್ಕಾರದ ಕಾರ್ಯಕ್ರಮಗಳ ಮೂಲಕ ಸುಸ್ಥಿರ ಗ್ರಾಮೀಣ ಅಭಿವೃದ್ಧಿ-ದೂರದೃಷ್ಟಿ ಮತ್ತು ಕಾರ್ಯ ವಿಷಯ ಕುರಿತ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರ ಗ್ರಾಮೀಣ ಭಾಗದ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ರೂಪಿಸಿದೆ. ಅವುಗಳು ಸರಿಯಾಗಿ ಅನುಷ್ಠಾನವಾದಾಗ ಮಾತ್ರ ಅಭಿವೃದ್ಧಿ ಸಾಧಿಸಲು ಸಾಧ್ಯ. ಇಲ್ಲವಾದರೆ ಅಭಿವೃದ್ಧಿ ಮರೀಚಿಕೆಯಾಗಿ ಸರ್ಕಾರಿ ಯೋಜನೆಗಳು ಮೂಲೆ ಗುಂಪಾಗುತ್ತವೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಗ್ರಾಮಾಭಿವೃದ್ಧಿ ಯೋಜನೆಗಳನ್ನು ಸೂಕ್ತವಾಗಿ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಕ್ತ ವಿವಿ ಕುಲಸಚಿವ ಪ್ರೊ.ಕೆ.ಜಿ.ಚಂದ್ರಶೇಖರ್, ಅರ್ಥಶಾಸ್ತ್ರ ವಿಭಾಗದ ಅಧ್ಯಕ್ಷ ಡಾ.ಎಂ.ಎಸ್.ರಮಾನಂದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: