ಮೈಸೂರು

ಅಂಬೇಡ್ಕರ್ ನಾಮ ಫಲಕಕ್ಕೆ ಅವಮಾನ : ಕ್ರಮಕ್ಕೆ ಒತ್ತಾಯ

ಮೈಸೂರು,ಜು.28:- ನಂಜನಗೂಡು ತಾಲೂಕಿನ ಹೆಮ್ಮರಗಾಲ ಗ್ರಾಮದಲ್ಲಿ ಅಂಬೇಡ್ಕರ್ ನಾಮ ಫಲಕಕ್ಕೆ  ಸೆಗಣಿ ಬಡಿಯುವ ಮೂಲಕ ಅಪಮಾನ ಮಾಡಲಾಗಿದ್ದು, ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿದರು.
ನಂಜನಗೂಡು ತಹಶಿಲ್ದಾರ್ ದಯಾನಂದ್ ಹಾಗೂ ತಾಲೂಕು ಸಮಾಜ ಕಲ್ಯಾಣಧಿಕಾರಿ ಶ್ರೀನಿವಾಸ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನೆಡೆಸಿದರು. ಈ ಕುರಿತು ವಿಚಾರ ತಿಳಿದು ಸ್ಥಳಕ್ಕಾಗಮಿಸಿದ ಸ್ಥಳೀಯಜಿಲ್ಲಾ ಪಂಚಾಯತ್ ಸದಸ್ಯೆ ಲತಾ ಸಿದ್ದಶೆಟ್ಟಿ ರಾಷ್ಟ್ರ ನಾಯಕರಿಗೆ ಅವಮಾನ ಮಾಡಿದ ಯಾರೇ ಆದರೂ ಅವರಿಗೆ ಕಾನೂನು ಕ್ರಮ ಕೈಗೊಳ್ಳಲೇ ಬೇಕು ಎಂದು ಒತ್ತಾಯಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: