ಪ್ರಮುಖ ಸುದ್ದಿ

ವೋಟ್ ಬ್ಯಾಂಕ್‌ಗಾಗಿ ಅಲ್ಪಸಂಖ್ಯಾತರ ಓಲೈಕೆ ಬಿಡಿ: ಸುರೇಶ್‌ಬಾಬು

ಪ್ರಮುಖ ಸುದ್ದಿ, ಕೆ.ಆರ್.ಪೇಟೆ, ಜು.೨೮: ಕಾಂಗ್ರೆಸ್ ದೇಶದ ಬಹುಸಂಖ್ಯಾತ ಹಿಂದೂಗಳನ್ನು ಕಡೆಗಣಿಸಿ, ಕೇವಲ ವೋಟ್ ಬ್ಯಾಂಕ್‌ಗಾಗಿ ಅಲ್ಪಸಂಖ್ಯಾತರನ್ನು ಹೆಚ್ಚು ಓಲೈಸಿದ್ದರ ಪರಿಣಾಮವಾಗಿ ದೇಶದಲ್ಲಿ ಅಸ್ತಿತ್ವವನ್ನೇ ಕಳೆದುಕೊಳ್ಳುತ್ತಿದ್ದು, ಇನ್ನಾದರೂ ವೋಟಿಗಾಗಿ ಓಲೈಸುವುದನ್ನು ಬಿಡಲಿ ಎಂದು ಮೈಸೂರು ವಿಭಾಗದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುರೇಶ್‌ಬಾಬು ಟೀಕಿಸಿದರು.
ತಾಲೂಕಿನ ಬೂಕನಕೆರೆ ಹೋಬಳಿಯ ಶಕ್ತಿ ಕೇಂದ್ರದಲ್ಲಿ ನಡೆದ ವಿಸ್ತಾರಕರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ಸರಕಾರ ಯಾವುದೇ ಕಪ್ಪುಚುಕ್ಕೆ ಇಲ್ಲದಂತೆ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಇದರಿಂದಾಗಿ ಈಚೆಗೆ ನಡೆದ ಎಲ್ಲಾ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಜಯಸಾಧಿಸುವ ಮೂಲಕ ತನ್ನ ಶಕ್ತಿಯನ್ನು ದ್ವಿಗುಣಗೊಳಿಸಿಕೊಂಡಿದೆ. ಇದು ಪ್ರಧಾನಿ ನರೇಂದ್ರಮೋದಿ ಅವರ ಸ್ವಚ್ಛ ಆಡಳಿತಕ್ಕೆ ಸಂದ ಗೌರವವಾಗಿದೆ. ಮೋದಿ ಅಲೆಯಿಂದಾಗಿ ಕಾಂಗ್ರೆಸ್ ಕಳೆದ ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಕ್ಕೆ ಅಗತ್ಯವಾಗಿದ್ದ ೪೪ ಸ್ಥಾನವನ್ನೂ ಸಹ ಗೆಲ್ಲುವಲ್ಲಿ ವಿಫಲವಾಗಿದೆ ಎಂದು ಹೇಳಿದರು.
ದೇಶದ ರಕ್ಷಣೆ ಬಗ್ಗೆ ಸದಾ ಜಾಗೃತಿ ವಹಿಸುತ್ತಿರುವ ಏಕೈಕ ಪಕ್ಷ ಬಿಜೆಪಿ. ಉಳಿದ ಎಲ್ಲಾ ಪಕ್ಷಗಳು ದೇಶವೇನಾದರೂ ಆಗಲಿ ನಮಗೆ ಅಧಿಕಾರ ಸಿಗಲು ಎನ್ನುವ ಮನೋಭಾವನೆ ಹೊಂದಿವೆ. ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಸಿದ್ದರಾಮಯ್ಯ ಎಸ್‌ಸಿ, ಎಸ್‌ಟಿ ಮಕ್ಕಳಿಗೆ ಮಾತ್ರ ಹೆಚ್ಚು ದಿನ ಹಾಲು ಕೊಡುವ ಯೋಜನೆ ಮತ್ತು ಬಸ್ ಪಾಸ್ ಕೊಡುವ ಯೋಜನೆ, ಲ್ಯಾಪ್ ಟಾಪ್ ಕೊಡುವ ಯೋಜನೆ ಜಾರಿಗೆ ತರುವ ಮೂಲಕ ಎಳೆಯ ಮಕ್ಕಳಲ್ಲಿ ಜಾತಿಯ ವಿಷ ಬೀಜ ಬಿತ್ತುವ ಮೂಲಕ ಸಮಾಜವನ್ನು ಒಡೆಯುತ್ತಿದ್ದಾರೆ ಎಂದು ದೂರಿದರು. (ವರದಿ ಬಿ.ಎಂ)

Leave a Reply

comments

Related Articles

error: