ಕರ್ನಾಟಕಪ್ರಮುಖ ಸುದ್ದಿ

ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಚೇರಿ ಮೇಲೆ ಎಸಿಬಿ ದಾಳಿ

ರಾಜ್ಯ(ಹುಬ್ಬಳ್ಳಿ)ಜು.28:-  ಹುಬ್ಬಳ್ಳಿಯ ರೈಲ್ವೇ ಪೊಲೀಸ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕೆ ಮಲ್ಲೇಶ ಕಚೇರಿ ಮೇಲೆ  ಹುಬ್ಬಳ್ಳಿಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯ ರೈಲ್ವೆ ಪೊಲೀಸ್  ಠಾಣೆಯ‌ ಕ್ರೈಮ್ ವಿಭಾಗದ ಸಬ್ ಇನ್ಸ್ಪೆಕ್ಟರ್  ಆಗಿ ಕೆಲಸ ನಿರ್ವಹಿಸುತ್ತಿದ್ದರು. ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಸಿದ ಆರೋಪದ  ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ಹುಬ್ಬಳ್ಳಿಯ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯ ರೈಲ್ವೆ ಪೊಲೀಸ ಠಾಣೆಯಲ್ಲಿ  ದಾಖಲೆ ಪರಿಶೀಲನೆ ನಡೆಸಿದರು.  (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: