ಕರ್ನಾಟಕ

ಕೊಡಗು ಜಿಲ್ಲೆಯ ಇಂದಿನ ಮಳೆ ವಿವರ

ಮಡಿಕೇರಿ ಜು.28: ಕೊಡಗು ಜಿಲ್ಲೆಯ ಇಂದಿನ ಸರಾಸರಿ ಮಳೆ 20.57 ಮಿ.ಮೀ. ಕಳೆದ ವರ್ಷ ಇದೇ ದಿನ 7 ಮಿ.ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ 1213.55 ಮಿ.ಮೀ., ಕಳೆದ ವರ್ಷ ಇದೇ ಅವಧಿಯಲ್ಲಿ 1147.43 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 34.45 ಮಿ.ಮೀ. ಕಳೆದ ವರ್ಷ ಇದೇ ದಿನ 9.45 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1659.5 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1705.62 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 7.15 ಮಿ.ಮೀ. ಕಳೆದ ವರ್ಷ ಇದೇ ದಿನ 7.72 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1033.71 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 867.88 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 20.12 ಮಿ.ಮೀ. ಕಳೆದ ವರ್ಷ ಇದೇ ದಿನ 3.82 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 947.48 ಮಿ.ಮೀ.  ಕಳೆದ ವರ್ಷ ಇದೇ ಅವಧಿಯಲ್ಲಿ 868.79 ಮಿ.ಮೀ. ಮಳೆಯಾಗಿತ್ತು. ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ  ಮಳೆ ವಿವರ:-ಮಡಿಕೇರಿ ಕಸಬಾ 33, ನಾಪೋಕ್ಲು 19.2, ಸಂಪಾಜೆ 39.6, ಭಾಗಮಂಡಲ 46, ವಿರಾಜಪೇಟೆ ಕಸಬಾ 8.4, ಹುದಿಕೇರಿ 8.5, ಶ್ರೀಮಂಗಲ 3.8, ಪೊನ್ನಂಪೇಟೆ 4.2, ಅಮ್ಮತ್ತಿ 8, ಬಾಳೆಲೆ 10, ಸೋಮವಾರಪೇಟೆ ಕಸಬಾ 29.6, ಶನಿವಾರಸಂತೆ 15.4, ಶಾಂತಳ್ಳಿ 44.4, ಕೊಡ್ಲಿಪೇಟೆ 13.4, ಕುಶಾಲನಗರ 3.6, ಸುಂಟಿಕೊಪ್ಪ 14.3 ಮಿ.ಮೀ. ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.19 ಅಡಿಗಳು, ಕಳೆದ ವರ್ಷ ಇದೇ ದಿನ 2857.9 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 6 ಮಿ.ಮೀ. ಕಳೆದ ವರ್ಷ ಇದೇ ದಿನ 38.4 ಮಿ.ಮೀ., ಇಂದಿನ ನೀರಿನ ಒಳ ಹರಿವು 3772 ಕ್ಯೂಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 2558 ಕ್ಯೂಸೆಕ್. ಇಂದಿನ ನೀರಿನ ಹೊರಹರಿವು ನದಿಗೆ 3800, ನಾಲೆಗೆ 50 ಕ್ಯೂಸೆಕ್. (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: