ಮೈಸೂರು

‘ಪರೀಕ್ಷೆ ಮತ್ತು ಮೌಲ್ಯಮಾಪನ’ದ ತರಬೇತಿ ಕಾರ್ಯಾಗಾರ

ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ(ಸಿಐಐಎಲ್)ಯ ಎನ್‍ಟಿಎಸ್-ಐ (ನ್ಯಾಷನಲ್ ಟೆಸ್ಟಿಂಗ್ ಸರ್ವಿಸ್-ಇಂಡಿಯಾ)ನಲ್ಲಿ 6 ದಿನಗಳ ಪರೀಕ್ಷೆ ಮತ್ತು ಮೌಲ್ಯಮಾಪನದ ಬಗ್ಗೆ ತರಬೇತಿ ಕಾರ್ಯಾಗಾರವು ಆರಂಭವಾಗಿದೆ. ಹಿಂದಿ ಉಪನ್ಯಾಸಕರು ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಸಿಐಐಎಲ್ ಮಾಜಿ ನಿರ್ದೇಶಕ ಪ್ರೊ. ರಾಜೇಶ್ ಸಚ್‍ದೇವ್ ಕಾರ್ಯಾಗಾರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ, ನೈಜ ಮತ್ತು ವೈಜ್ಞಾನಿಕ ಮೌಲ್ಯಮಾಪನಕ್ಕೆ ಇಂದು ಪ್ರಾಮುಖ್ಯತೆಯಿದೆ. ಶಿಕ್ಷಕರು ಪ್ರಥಮ, ದ್ವಿತೀಯ ಮತ್ತು ತೃತೀಯ ಭಾಷೆಗಳ ವಿಭಿನ್ನ ಮಾದರಿಯ ಬೋಧನೆ, ಪರೀಕ್ಷೆ ಮತ್ತು ಮೌಲ್ಯಮಾಪನದ ಬಗ್ಗೆ ತಿಳಿದಿರಬೇಕು. ವಿದ್ಯಾರ್ಥಿಗಳ ಜ್ಞಾನವನ್ನು ಇನ್ನಷ್ಟು ವೃದ್ಧಿಸುವ ನಿಟ್ಟಿನಲ್ಲಿ ಶಿಕ್ಷಕರು ವಿಶೇಷ ಕಾಳಜಿ ವಹಿಸಿ ನವೀನ ಮಾದರಿಯ ಬೋಧನಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಎಲ್‍ಡಿಸಿ-ಐಎಲ್ ಅಧಿಕಾರಿ ಡಾ.ಎಲ್. ರಾಮಮೂರ್ತಿ ಪ್ರಸ್ತುತ ಶಿಕ್ಷಣ ವ್ಯವಸ್ಥೆ ಬಗ್ಗೆ ಮಾತನಾಡಿದರು.

ಡಾ.ಎಂ ಬಾಲಕುಮಾರ್, ಎಸ್‍ಆರ್‍ಎಲ್‍ಸಿ ನಿವೃತ್ತ ಪ್ರಾಂಶುಪಾಲ ಪ್ರೊ.ಕೆ.ವಿ.ವಿ.ಎಲ್‍ ರಾವ್ ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು. 17 ಸಹಾಯಕ ಪ್ರೊಫೆಸರ್‍ಗಳು, ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

comments

Related Articles

error: